-->

ಬರ್ತ್ ಡೇ ದಿನವೇ ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕಿ ನೇಣಿಗೆ ಶರಣು

ಬರ್ತ್ ಡೇ ದಿನವೇ ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕಿ ನೇಣಿಗೆ ಶರಣು

ಚಾಮರಾಜನಗರ: ತನ್ನ ಬರ್ತ್ ಡೇ ದಿನವೇ ಡೆತ್ ನೋಟ್ ಬರೆದಿಟ್ಟು ಕಾಲೇಜು ಉಪನ್ಯಾಸಕಿಯಳರ್ವರು ನೇಣಿಗೆ ಶರಣಾಗಿರುವ ಚಾಮರಾಜನಗರದ ಯಳಂದೂರು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.

ಕಾಲೇಜು ಉಪನ್ಯಾಸಕಿ ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಜಿಎಸ್ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಈಕೆ ಅದೇ ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಚಂದನಾ ತಮ್ಮ 26ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಬೇಕಿತ್ತು‌. ಅದರೆ ವಿಧಿಯಾಟ ಬೇರೇಯೆ ಇತ್ತು. ಆಕೆ ಇಂದೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಚಂದನಾ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಆದರೆ ಸಾವಿಗೆ ಕಾರಣ ಇನ್ನೂ ನಿಗೂಢವಾಗಿದೆ. ಈ ಬಗ್ಗೆ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article