ಸುಳ್ಯ
ರಾಷ್ಟ್ರ ಮಟ್ಟದಲ್ಲೇ ಸಂಚಲನ ಸೃಷ್ಟಿಸಿದ್ದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಅರೋಪಿಗಳ ಬಂಧನವಾಗಿದ್ದು, ಇವರನ್ನು ಇಂದು ಬೆಳ್ಳಾರೆಗೆ ಕರೆತಂದು ಸ್ಥಳ ಮಹಜರು ನಡೆಸಲಾಯಿತು.
ಹತ್ಯೆಯ ಪ್ರಮುಖ ಆರೋಪಿಗಳಾದ ಶಿಯಾಬ್, ರಿಯಾಜ್ ಬಶೀರ್ ರನ್ನು ಪೊಲೀಸರು ಕೊಲೆಯಾದ ಸ್ಥಳಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ಮಾಡಿದರು. ಪ್ರವೀಣ್ ನಡೆಸುತ್ತಿದ್ದ ಮಾಸ್ತಿಕಟ್ಟೆಯಲ್ಲಿರುವ ಅಕ್ಷಯ ಚಿಕನ್ ಸೆಂಟರ್ ಮುಂದೆಯೇ ಈ ಕೊಲೆ ನಡೆದಿತ್ತು. ಇಂದು ಈ ಪ್ರದೇಶದಲ್ಲಿ ಕೊಲೆ ನಡೆಸಿದ ಕುರಿತು ಆರೋಪಿಗಳ ಸ್ಥಳ ಮಹಜರು ಪುತ್ತೂರು ಡಿವೈಎಸ್ಪಿ ಗಾನಾ.ಪಿ ಕುಮಾರ್ ನೇತೃತ್ವದಲ್ಲಿ ನಡೆದಿದೆ.