Sulya :-ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ. ಮತ್ತಿಬ್ಬರು ಆರೋಪಿಗಳ ಬಂಧನ. ಆರೋಪಿಗಳ ಸಂಖ್ಯೆ ಆರಕ್ಕೆ ಏರಿಕೆ..

ಸುಳ್ಯ

ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು,ಈಗ ಒಟ್ಟು ಆರೋಪಿಗಳ ಸಂಖ್ಯೆ ಆರಕ್ಕೆ ಏರಿದೆ.

ಬಂಧಿತ ಆರೋಪಿಗಳನ್ನು ಸುಳ್ಯ ನಾವೂರು ಮಹಾಮ್ಮಾಯಿ ದೇವಸ್ಥಾನದ ಬಳಿಯ ನಿವಾಸಿ ಯಾಕುಬ್ ಎಂಬವರ ಪುತ್ರ ಆಬಿದ್ (22),
ಹಾಗೂ ಬೆಳ್ಳಾರೆ ಗೌರಿಹೊಳೆ ಬಳಿಯ ನಿವಾಸಿ ಮಹಮ್ಮದ್ ಎಂಬವರ ಪುತ್ರ ನೌಫಾಲ್ (28) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಈಗ ಬಂಧಿಸಲಾಗಿದೆ.