Sulya:-ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಿನ್ನಲೆ. ಇನ್ನೊರ್ವ ಆರೋಪಿ ಬಂಧನ. ಆರೋಪಿಗಳ ಸಂಖ್ಯೆ ಏಳಕ್ಕೆ ಏರಿಕೆ.

ಸುಳ್ಯ

ಬೆಳ್ಳಾರೆಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಸಂಬಂಧಿಸಿದಂತೆ ಇನ್ನೊರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇದೀಗ ಆರೋಪಿಗಳ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಹತ್ಯೆಗೆ ಯೋಜನೆ ರೂಪಿಸಿದ ಆರೋಪದಲ್ಲಿ ಈತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯನ್ನು ಸುಳ್ಯ ಟೌನ್, ಜಟ್ಟಿಪಳ್ಳ ಅಬ್ಬಾಸ್ ಎಂಬವರ ಪುತ್ರ ಅಬ್ದುಲ್ ಕಬೀರ್ ಸಿ ಎ (33) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಒಟ್ಟು  ಏಳು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ.
 
ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಎಲ್ಲಾ ಆರೋಪಿಗಳನ್ನು ಗುರುತಿಸಲಾಗಿದ್ದು, ಅವರ ಪತ್ತೆಗಾಗಿ ಶೋಧಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.