ಉತ್ತರ ಕನ್ನಡ: ಹೊನ್ನಾವರದಲ್ಲಿ 2017ರಲ್ಲಿ ನಡೆದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ ಅಂದು ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿಗೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ಟೀಕೆಗೊಳಗಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಪರೇಶ್ ಮೇಸ್ತನನ್ನು ಹತ್ಯೆಗೈದ ಪ್ರಮುಖ ಆರೋಪಿ ಅಝಾದ್ ಅಣ್ಣಿಗೇರಿಗೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಬಿಜೆಪಿಯ ಅಧಿಕಾರದ ಅವಧಿಯಲ್ಲಿಯೇ ಈ ಸ್ಥಾನ ದೊರಕಿರುವುದು ಭಾರೀ ಟೀಕೆಗೆ ಕಾರಣವಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿದೆ. ಅಲ್ಲದೆ ಕೆಲ ಬಿಜೆಪಿಗರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಟೀಕೆ, ಅಸಮಾಧಾನ ಹಿನ್ನೆಲೆಯಲ್ಲಿ ವಕ್ಫ್ ಬೋರ್ಡ್ ಪದಾಧಿಕಾರಿಗಳನ್ನು ಬದಲಿಸುವಂತೆ ಜಿಲ್ಲಾ ವಕ್ಫ್ ಬೋರ್ಡ್ ಸಲಹಾ ಸಮಿತಿ ಅಧ್ಯಕ್ಷ ಅನೀಶ್ ತಹಶಿಲ್ದಾರ್ ಸಚಿವರಿಗೆ ಪತ್ರ ಬರೆದಿದ್ದಾರೆ.