-->
OP - Pixel Banner ad
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಗಮದ ಅಧ್ಯಕ್ಷರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ 2ನೇ ಬಾರಿಗೆ ಅವಿರೋಧ ಆಯ್ಕೆ

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಗಮದ ಅಧ್ಯಕ್ಷರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ 2ನೇ ಬಾರಿಗೆ ಅವಿರೋಧ ಆಯ್ಕೆ

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಗಮಕ್ಕೆ 'ಸಹಕಾರ ರತ್ನ' ಡಾ.ಎಂ.ಎನ್.ರಾಜೇಂದ್ರ ಕುಮಾರ್ 2ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಗಮದ ನಿರ್ದೇಶಕ ಡಾ.ಐಕಳಬಾವ ದೇವಿಪ್ರಸಾದ ಶೆಟ್ಟಿ ಈ ಬಗ್ಗೆ ಮಾಹಿತಿ ನೀಡಿ, ಸಹಕಾರಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ಮೂಲಕ ಹೊಸ ಈ ಕ್ಷೇತ್ರಕ್ಕೆ ಆಯಾಮವನ್ನೇ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನೀಡಿದ್ದಾರೆ. ಇದೀಗ ಅವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಗಮಕ್ಕೆ 2ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌. ಅವರ ಈ ಸಾಧನೆಯನ್ನು ಗುರುತಿಸಿ ಸೆ.24ರಂದು ಮಂಗಳೂರಿನ ಎಸ್ ಸಿಡಿಸಿಸಿ ಬ್ಯಾಂಕ್ ಸಭಾಭವನದಲ್ಲಿ  ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಈ ಅಭಿನಂದನಾ ಸಮಾರಂಭವನ್ನು ಅದ್ದೂರಿಯಾಗಿ ನಡೆಸಲಾಗುತ್ತದೆ ಎಂದು ಹೇಳಿದರು.

ಈ ಸಮಾರಂಭದಲ್ಲಿ ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಅಭಿನಂದನಾ ಭಾಷಣ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಶುಭಾಶಂಸನಗೈಯಲಿದ್ದಾರೆ. ದಕ್ಷಿಣ ಭಾರತದ ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ ಹಾಗೂ  ಡಾ.ಐಕಳಬಾವ ದೇವಿಪ್ರಸಾದ ಶೆಟ್ಟಿ ಬೆಳಪು ಉಪಸ್ಥಿತಿ ಇರಲಿದೆ ಎಂದು ಹೇಳಿದರು.

Ads on article

Advertise in articles 1

advertising articles 2

Advertise under the article

IMG-20220907-WA0033 IMG_20220827_133242