ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 3 ವರ್ಷ ಸಾದಾ ಸಜೆ, ದಂಡ

ಮಂಗಳೂರು: ವ್ಯಕ್ತಿಯೋರ್ವನು ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ( ಪೊಕ್ಸೊ ) ಹಾಗೂ ಎಫ್‌ಟಿಎಸ್‌ಸಿ -1 ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆರೋಪಿಗೆ ಮೂರು ವರ್ಷಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದೆ. 

ಮೂಡುಬಿದಿರೆಯ ಆನಂದ ಶಿಕ್ಷೆಗೊಳಗಾದ ಆರೋಪಿ. ಆರೋಪಿ 2021 ರ ಫೆ.12 ರಂದು ರಾತ್ರಿ ನೆರೆಮನೆಯ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ನಿರೀಕ್ಷಕಿ ರೋಸಮ್ಮ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಿಚಾರಣೆ ನಡೆಸಿ ಆನಂದ ಮೇಲಿನ ಆರೋಪ ಸಾಬೀತುಗೊಂಡಿದೆ.

ಈತನಿಗೆ ಪೊಕ್ಸೊ ಕಾಯ್ದೆಯ ಕಲಂ 8 ರಂತೆ 3 ವರ್ಷ ಸಾದಾ ಸಜೆ ಮತ್ತು 1,000 ರೂ. ದಂಡ ಹಾಗೂ ಕಲಂ 354 ರಡಿ 1 ವರ್ಷ ಸಾದಾ ಸಜೆ ಮತ್ತು 1000 ರೂ.ದಂಡ ವಿಧಿಸಲಾಗಿದೆ. ಅಲ್ಲದೆ ಬಾಲಕಿಗೆ ಪರಿಹಾರ ನೀಡುವಂತೆ ನ್ಯಾಯಾಧೀಶೆ ಮಂಜುಳಾ ಇಟ್ಟಿ  ಆದೇಶಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.
BREAKING NEWS
Loading latest news...
Join our WhatsApp Channel Powered By : Online Pudu