-->

ಕೋಲಾರ: ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ!

ಕೋಲಾರ: ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ!

ಕೋಲಾರ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತವೊಂದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ‌ ಕೋಲಾರ ಜಿಲ್ಲೆಯಲ್ಲಿ ಸಂಭವಿಸಿದೆ. 

ಕೋಲಾರ ತಾಲೂಕಿನ ಶಾಪೂರು ಕ್ರಾಸ್ ಬಳಿ ಸಂಭವಿಸಿದ ಈ ಅಪಘಾತದಲ್ಲಿ ಕಾರು ಚಾಲಕ ವಿಮಲ್ ( 27 ) ಮತ್ತು ಶರೀನಾ ( 22 ) ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಹರ್ಷಿತಾ, ಡೇವಿಡ್ , ವಿಮೋನಿಯಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಇವರೆಲ್ಲರೂ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತರು. ಚೆನ್ನೈನಿಂದ ಬಾಡಿಗೆ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದರೂ ಅವರು ಸಾವನ್ನಪ್ಪಿದ್ದಾರೆ. 

ಈ ಬಗ್ಗೆ ಕೋಲಾರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article