ಮಂಗಳೂರು ಮೂಲದ ದಂತವೈದ್ಯೆ ಪುಣೆಯಲ್ಲಿ ರಸ್ತೆ ಅಪಘಾತಕ್ಕೆ ಬಲಿ

ಮಂಗಳೂರು: ಮಂಗಳೂರು ಮೂಲದ ದಂತ ವೈದ್ಯೆಯೊಬ್ಬರು ಪುಣೆಯ ಪಿಂಪ್ರಿಯಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.

ಮೂಲತಃ ಮಂಗಳೂರಿನ ವೆಲೆನ್ಸಿಯಾ ನಿವಾಸಿ, ಪುಣೆಯ ಪ್ರಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದ ಜಿಶಾ ಜಾನ್(27) ಮೃತಪಟ್ಟ ದುರ್ದೈವಿ.

ಜಿಶಾ ಜಾನ್ ಸ್ಕೂಟರ್ ನಲ್ಲಿ ಮನೆಗೆ ಹೋಗುತ್ತಿದ್ದರು‌. ಈ ವೇಳೆ ಇವರ ಸ್ಕೂಟರ್ ಗೆ ಟ್ರಕ್ ಢಿಕ್ಕಿ ಹೊಡೆದಿದೆ‌.‌ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ‌. ಜಿಶಾ ಜಾನ್ ಪತಿ ಪುಣೆಯಲ್ಲಿ ಉದ್ಯಮಿಯಾಗಿದ್ದಾರೆ. 
BREAKING NEWS
Loading latest news...
Join our WhatsApp Channel Powered By : Online Pudu