ಬೆಳೆ ಹಾನಿ: ಸಂಕಷ್ಟದಲ್ಲಿ ಕರಾವಳಿ ರೈತರು- ತುರ್ತು ಪರಿಹಾರಕ್ಕೆ ರೈತ ಸಂಘ ಆಗ್ರಹ

ಬೆಳೆ ಹಾನಿ: ಸಂಕಷ್ಟದಲ್ಲಿ ಕರಾವಳಿ ರೈತರು- ತುರ್ತು ಪರಿಹಾರಕ್ಕೆ ರೈತ ಸಂಘ ಆಗ್ರಹ



ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿದ ವಿಪರೀತ ಮಳೆಯಿಂದ ಭತ್ತ ಮತ್ತು ಅಡಿಕೆ ಬೆಳೆಯುವ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಮಳೆಯಿಂದ ಶೇಕಡಾ 60ರಷ್ಟು ಫಸಲು ಹಾನಿಗೊಂಡಿದ್ದು, ಸಂತ್ರಸ್ತ ರೈತರಿಗೆ ತುರ್ತು ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.


ಮಾಧ್ಯಮದ ಜೊತೆಗೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಮನೋಹರ ಶೆಟ್ಟಿ ನಡಿಕಂಬಳಗುತ್ತು ಮತ್ತು ಜಿಲ್ಲಾ ಅಧ್ಯಕ್ಷ ಶ್ರೀಧರ ಶೆಟ್ಟಿ, ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.


ಪ್ರಸ್ತುತ ಪರಿಸ್ಥಿತಿಯಲ್ಲಿ ಬೆಳೆ ಹಾನಿ ವ್ಯಾಪಕವಾಗಿದ್ದು, ಕೀಟ ಬಾಧೆಯೂ ರೈತರನ್ನು ಸಂಕಷ್ಟಕ್ಕೀಡು ಮಾಡಿದೆ. ಈ ಹಿನ್ನೆಲೆಯಲ್ಲಿ ಎಕರೆಗೆ ಕನಿಷ್ಟ ರೂ. 50,000/- ಮಧ್ಯಂತರ ಪರಿಹಾರವಾಗಿ ನೀಡಬೇಕು ಎಂದು ಉಭಯ ನಾಯಕರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.