-->

Dharmastala :- ಕೊಕ್ಕಡದಲ್ಲಿ ಪವರ್ ಮ್ಯಾನ್ಗಳಿಗೆ ಹಲ್ಲೆ.. ಗಂಭೀರ ಗಾಯಗೊಂಡ ಪವರ್ ಮ್ಯಾನ್ ಆಸ್ಪತ್ರೆಗೆ ದಾಖಲು.

Dharmastala :- ಕೊಕ್ಕಡದಲ್ಲಿ ಪವರ್ ಮ್ಯಾನ್ಗಳಿಗೆ ಹಲ್ಲೆ.. ಗಂಭೀರ ಗಾಯಗೊಂಡ ಪವರ್ ಮ್ಯಾನ್ ಆಸ್ಪತ್ರೆಗೆ ದಾಖಲು.

ಧರ್ಮಸ್ಥಳ 

ವಿದ್ಯುತ್ ಬಿಲ್ ಪಾವತಿಸದ ಕಾರಣ ಸಂಪರ್ಕ ಕಡಿತಗೊಳಿಸಿದ ಹಿನ್ನೆಲೆ ಪವರ್ ಮ್ಯಾನ್ಗಳಿಗೆ ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡದಲ್ಲಿ (ಸೆ22) ಗುರುವಾರ ರಾತ್ರಿ ಸಂಭವಿಸಿದೆ.

ಹಲ್ಲೆ ನಡೆಸಿದಾತನನ್ನು ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ದಿವಂಗತ ಕಾಂತು ಪೂಜಾರಿಯವರ ಅಳಿಯ ರಿಜೀಶ್ (38)  ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಮೆಸ್ಕಾಂ ಪವರ್ ಮ್ಯಾನ್ ದುಂಡಪ್ಪ ರವರ ತಲೆಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೋರ್ವ ಪವರ್ ಮ್ಯಾನ್ ಉಮೇಶ್ ರವರಿಗೆ ಸಣ್ಣಪುಟ್ಟ ಗಾಯಗಳಾಗಿವೆ





ಏನಿದು ಪ್ರಕರಣ?

ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ದಿ. ಕಾಂತು ಪೂಜಾರಿ ಎಂಬುವವರ ಹೆಸರಿನ ವಿದ್ಯುತ್ ಶುಲ್ಕ 3530₹ ಇದ್ದು, ಇದನ್ನು ಪಾವತಿಸದ ಹಿನ್ನೆಲೆ ಸೆಪ್ಟೆಂಬರ್ 19ರಂದು ಮಧ್ಯಾಹ್ನ ಪವರ್ ಮ್ಯಾನ್ ಉಮೇಶ್ ದಿ. ಕಾಂತು ಪೂಜಾರಿ ಅವರ ಮನೆಗೆ ತೆರಳಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಈ ಸಂದರ್ಭ ಅವರ ಮನೆ ಅಳಿಯ ಮನೆಯಲ್ಲಿ ಇರಲಿಲ್ಲ. ಗೂಡ್ಸ್ ಲಾರಿ ಚಾಲಕರಾಗಿರುವ ರಿಜೀಶ್ ನಿಗೆ ಮನೆಯವರು ಫೋನ್ ಹಾಯಿಸಿ ಪವರ್ ಮ್ಯಾನ್ಗಳಿಗೆ ಮಾತನಾಡಲು ಹೇಳಿದ್ದಾರೆ. ಫೋನಿನಲ್ಲಿ ಪವರ್ ಮ್ಯಾನ್ ಉಮೇಶ್ ರವರಿಗೆ ಕೊಲೆ ಬೆದರಿಕೆಯನ್ನು ಆತ ಹಾಕಿದ್ದಾನೆ. ಇದನ್ನು ಉಮೇಶ್ ರವರು ಮೇಲಾಧಿಕಾರಿಗಳಿಗೆ ತಿಳಿಸಿದ್ದಾರೆ.
ಈ ಬಗ್ಗೆ ಕೊಕ್ಕಡ ಜೆಇ ಕೃಷ್ಣೇಗೌಡ ಈ ಬಗ್ಗೆ ತಾನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.



ಈ ಮಧ್ಯೆ ಸೆಪ್ಟೆಂಬರ್ 22ರಂದು ದಿ. ಕಾಂತು ಪೂಜಾರಿಯವರ ಮನೆಯವರು ವಿದ್ಯುತ್ ಶುಲ್ಕ ಪಾವತಿಸಿ, ಮರು ಸಂಪರ್ಕವನ್ನು ನೀಡುವಂತೆ ಆದೇಶವನ್ನು ಮೆಸ್ಕಾಂ ಕಚೇರಿಗೆ ತಲುಪಿಸಿದ್ದಾರೆ. 
ಆ ಪ್ರಕಾರ ಪವರ್ ಮ್ಯಾನ್ ಉಮೇಶ್ ರವರು ದಿ.ಕಾಂತು ಪೂಜಾರಿ ಅವರ ಮನೆಗೆ ಮರು ಸಂಪರ್ಕವನ್ನು ನೀಡಿ ಬಂದಿದ್ದಾರೆ.
ಗುರುವಾರ ಸಂಜೆ ಕರ್ತವ್ಯ ಮುಗಿಸಿ ರಾತ್ರಿ ಕೊಕ್ಕಡ ಜಂಕ್ಷನ್ ನಲ್ಲಿ ಉಮೇಶ್ ಹಾಗೂ ಅವರ ಸಹೋದ್ಯೋಗಿಗಳು ದಿನಸಿ ಸಾಮಗ್ರಿಗಳನ್ನು ಖರೀದಿಸುವ ವೇಳೆ ಲಾರಿ ಚಾಲಕರಾಗಿರುವ ರಿಜಿಶ್ ಉಮೇಶ್ ಯಾರೆಂದು ಪವರ್ ಮ್ಯಾನ್ಗಳನ್ನು ಪ್ರಶ್ನಿಸಿದ್ದಾರೆ. ಈ ಸಂದರ್ಭ ಸ್ಥಳದಲ್ಲಿಯೇ ಇದ್ದ ಉಮೇಶ್ ತಾನೆ ಎಂದು ಪರಿಚಯಿಸಿಕೊಂಡಿದ್ದಾರೆ.


 ಈ ಸಂದರ್ಭ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಉಮೇಶ್ ರವರನ್ನು ನಿಂದಿಸಿ ಹಲ್ಲೆಗೆ ರಿಜೀಶ್ ಮುಂದಾದರು. ಈ ಸಂದರ್ಭ ಸಹೋದ್ಯೋಗಿಯಾದ ಉಪ್ಪಾರಪಳಿಕೆಯ ಪವರ್ ಮ್ಯಾನ್ ದುಂಡಪ್ಪ ಮಧ್ಯಪ್ರವೇಶಿಸಿ ಮಾತುಕತೆ ನಡೆಸಿ ಸಮಾಧಾನ ಸಿದ್ದಾರೆ. ಪರಿಸ್ಥಿತಿ ಶಾಂತಗೊಳಿಸಿ, ತೆರಳುವಾಗ ಪಕ್ಕದಲ್ಲಿ ಇದ್ದ ಸೋಡಾ ಬಾಟಲಿಯಿಂದ ರಿಜೀಶ್ ದುಂಡಪ್ಪ ಅವರ ತಲೆಗೆ ಬಲವಾಗಿ ಹೊಡೆದಿದ್ದಾರೆ. 
ಈ ಸಂದರ್ಭದಲ್ಲಿ ಗಂಭೀರ ಗಾಯಗೊಂಡ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಹಲ್ಲೆ ನಡೆಸಿದ ಆರೋಪಿಗೆ ಕಾನೂನಿನಡಿ ಕಠಿಣ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಮೇಲಾಧಿಕಾರಿಗಳು ಒತ್ತಾಯಿಸಿದ್ದಾರೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article