-->

ಮಂಗಳೂರು ದಸರಾ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರಿಂದ ಉದ್ಘಾಟನೆ

ಮಂಗಳೂರು ದಸರಾ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರಿಂದ ಉದ್ಘಾಟನೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾ-2022 ಉದ್ಘಾಟನೆಯನ್ನು ಕೇಂದ್ರದ ಮಾಜಿ ಸಹಾಯಕ ವಿತ್ತ ಸಚಿವ, ಕುದ್ರೋಳಿ ಶ್ರೀಕ್ಷೇತ್ರದ ಅಭಿವೃದ್ಧಿ ರೂವಾರಿ ಜನಾರ್ದನ ಪೂಜಾರಿ ಅವರು ನೆರವೇರಿಸಲಿದ್ದಾರೆ. 

ಸೆ.26ರಂದು ಬೆಳಗ್ಗೆ 11.15ಕ್ಕೆ ದಸರಾ ಉದ್ಘಾಟನೆ ನಡೆಯಲಿದ್ದು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ, ಮಹಾಲಿಂಗ ನಾಯ್ಕ್ ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ಸೆ.26ರಿಂದ ಆರಂಭಗೊಂಡು ಅ.6ರವರೆಗೆ ನಾನಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ನಡೆಯಲಿದೆ. ಅ.5ರಂದು ಸಂಜೆ 4ಕ್ಕೆ ಮಂಗಳೂರು ದಸರಾ ಬೃಹತ್ ಶೋಭಾಯಾತ್ರೆ ಆರಂಭವಾಗಲಿದ್ದು, ಈ ಮೆರವಣಿಗೆಗೆ ರಾಜ್ಯದ ನಾನಾ ಕಡೆಯಿಂದ ಆಗಮಿಸಿ ಕಲಾತಂಡಗಳು, ಹುಲಿವೇಷ ಹಾಗೂ ಇತರ ವೇಷದ ಟ್ಯಾಬ್ಲೋಗಳು, ವೇಷಭೂಷಣಗಳು, ಚೆಂಡೆ ತಂಡಗಳು ಮೆರುಗು ನೀಡಲಿದೆ.

500ಕ್ಕೂ ಅಧಿಕ ವಾಹನ ಪಾರ್ಕಿಂಗ್ (ಬಾಕ್ಸ್)
ದಸರಾ ಮಹೋತ್ಸವ ಮೆರವಣಿಗೆಗೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಶ್ರೀ ಕ್ಷೇತ್ರದ ಪಾರ್ಕಿಂಗ್ ವ್ಯವಸ್ಥೆ ಮಾತ್ರವಲ್ಲದೆ ಒಟ್ಟು 7ಕಡೆಗಳಲ್ಲಿ 500ಕ್ಕೂ ಅಧಿಕ ವಾಹನಗಳಿಗೆ ಪಾರ್ಕಿಂಗ್ ಮಾಡುವಷ್ಟು ವ್ಯವಸ್ಥೆಯನ್ನು ಕ್ಷೇತ್ರದ ಭಕ್ತಾದಿಗಳಿಂದ ಸಹಕಾರದಿಂದ ಮಾಡಲಾಗಿದೆ.


Ads on article

Advertise in articles 1

advertising articles 2

Advertise under the article