ರಾಜ್ಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೆಬಲ್ ಹುದ್ದೆಗೆ ಅರ್ಜಿ ಆಹ್ವಾನ

ರಾಜ್ಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೆಬಲ್ ಹುದ್ದೆಗೆ ಅರ್ಜಿ ಆಹ್ವಾನ






ಪ್ರಸ್ತುತ ರಾಜ್ಯ ಸರ್ಕಾರದ ಪೊಲೀಸ್ ಇಲಾಖೆಯಲ್ಲಿ ಸಶಸ್ತ್ರ ದಳದಲ್ಲಿ ಖಾಲಿ ಇರುವ 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (Armed Police Constable) ಹುದ್ದೆಗಳಿಗೆ ಪೊಲೀಸ್ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಸರ್ಕಾರ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯ ಲಿಂಗ CAR & DAR) ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ನೇಮಕಾತಿ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೂ ಅದೇ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

https://ksp.karnataka.gov.in/ ಅಥವಾ https://ksp-recruitment.in/ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ಸಶಸ್ತ್ರ ಪೊಲೀಸ್ ಕಾನ್ಸ್‌ಟೆಬಲ್ ಸಾಮಾನ್ಯ ಪುರುಷ CAR & DAR- ಒಟ್ಟು ಹುದ್ದೆ 2996 ಹುದ್ದೆಗಳು

ಸಶಸ್ತ್ರ ಪೊಲೀಸ್ ಕಾನ್ಸ್‌ಟೆಬಲ್ ಪುರುಷ ತೃತೀಯ ಲಿಂಗ CAR & DAR- ಒಟ್ಟು ಹುದ್ದೆ 68 ಹುದ್ದೆಗಳು

ಒಟ್ಟು ಹುದ್ದೆಗಳು: 3064

ವಯೋಮಿತಿ: ಕನಿಷ್ಟ 18 ವರ್ಷ ಹಾಗೂ ಗರಿಷ್ಟ 27 ವರ್ಷ (ವಯೋಮಿತಿಯಲ್ಲಿ ಸಡಿಲಿಕೆ ಇದೆ.)

ವಿದ್ಯಾರ್ಹತೆ: SSLC ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಇದಲ್ಲದೇ CBSE ಮತ್ತು ICSE ಮಂಡಳಿ ನಡೆಸುವ 10ನೇ ಕ್ಲಾಸ್ ಪರೀಕ್ಷೆ, ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 10 ಪರೀಕ್ಷೆ, ನ್ಯಾಷನಲ್ ಇನ್ಸ್ ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್ ಕೆಒಎಸ್ ಪಾಸ್ ಆಗಿದ್ದವರು ಅರ್ಜಿ ಸಲ್ಲಿಸಬಹುದು.


ವೇತನ ಶ್ರೇಣಿ - ರೂ.23,500 ರಿಂದ ರೂ.47,650


ಆಯ್ಕೆಯ ವಿಧಾನ - ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದವರಲ್ಲಿ 1:5 ಅನುಪಾತದಲ್ಲಿ ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ತೇರ್ಗಡೆ ನಡೆಸಲಾಗುತ್ತದೆ. ಎರಡು ಪರೀಕ್ಷೆಯಲ್ಲಿ ಪಾಸ್ ಆದವರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.


ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 400/- ಇತರರಿಗೆ ರಿಯಾಯಿತಿ ಇದೆ.


ಹುದ್ದೆಗಳಿಗೆ ದಿನಾಂಕ 19-09-2022ರಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-10-2022 ಆಗಿರುತ್ತದೆ.


ಆನ್‌ಲೈನ್ ಮೂಲಕ ಯಾ ಅಧಿಕೃತ ಬ್ಯಾಂಕ್ ಚಲನ್ ಮೂಲಕ ಅಥವಾ ಸ್ಥಳೀಯ ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಬಹುದು. ಶುಲ್ಕ ಪಾವತಿಗೆ ಅಂತಿಮ ದಿನ: 03-11-2022


ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್‌ಸೈಟ್‌ಗೆ ಭೇಟಿ ನೀಡಿ...


https://ksp.karnataka.gov.in/ ಅಥವಾ https://ksp-recruitment.in/