ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಅಕ್ರಮ: ಪ್ರಮುಖ ಆರೋಪಿ ಅರೆಸ್ಟ್

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಪ್ರಮುಖ ಆರೋಪಿ ಸಂಜೀವ ಲಕ್ಷ್ಮಣ ಭಂಡಾರಿ ಎಂಬಾತನನ್ನು ಬೆಳಗಾವಿ ಜಿಲ್ಲಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 13ಕ್ಕೆ ಏರಿದೆ. 

ಆರೋಪಿ ಸಂಜೀವ ಲಕ್ಷ್ಮಣ ಭಂಡಾರಿ ಈ ಹಿಂದೆ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮ ಎಸಗಿ ಜೈಲು ಪಾಲಾಗಿದ್ದು, ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಇದೀಗ ಕೆಪಿಟಿಸಿಎಲ್ ನೇಮಕಾತಿಯ ಅಕ್ರಮದ ಬಳಿಕ ತಲೆಮರೆಸಿಕೊಂಡಿದ್ದ. 

ಆರೋಪಿಯನ್ನು ಬಂಧಿಸಿರುವ ಪೊಲೀಸರು ಗೋಕಾಕದ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆರೋಪಿಯನ್ನು ಏಳು ದಿನಗಳವರೆಗೆ ಪೊಲೀಸ್ ವಶಕ್ಕೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ. ಆ.7ರಂದು ಗೋಕಾಕದಲ್ಲಿ ನಡೆದ ಪರೀಕ್ಷೆಯಲ್ಲಿ ಸಿದ್ದಪ್ಪ ಕೆಂಪಣ್ಣ ಮದಿಹಳ್ಳಿ ಎಂಬಾತ ಸ್ಮಾಟ್‌ ವಾಚ್ ಬಳಸಿ, ಪ್ರಶ್ನೆಪತ್ರಿಕೆ ಫೋಟೊ ತೆಗೆದು ಟೆಲಿಗ್ರಾಮ್ ಆ್ಯಪ್ ಮೂಲಕ ಹೊರಗೆ ಕಳುಹಿಸಿದ್ದ. 

ಈ ಬಗ್ಗೆ ಸಚಿನ್ ಎಂಬ ಇನ್ನೊಬ್ಬ ಅಭ್ಯರ್ಥಿ ದೂರು ನೀಡಿದ್ದ. ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಈ ಅಕ್ರಮ ಎಸಗಿರುವುದು ಖಚಿತವಾಗಿತ್ತು. ಈ ಹಿನ್ನಲೆಯಲ್ಲಿ ಆ .22 ರಂದು ಒಂಬತ್ತು ಮಂದಿ ಹಾಗೂ ಆ .24 ರಂದು ಮೂವರು ಸೇರಿ ಒಟ್ಟು 12 ಆರೋಪಿಗಳನ್ನು ಬಂಧಿಸಲಾಗಿತ್ತು.
BREAKING NEWS
Loading latest news...
Join our WhatsApp Channel Powered By : Online Pudu