ಗದಗ : ಚೂರಿಯಿಂದ ಇರಿದು ಯುವಕನ ಹತ್ಯೆ!

ಗದಗ: ದುಷ್ಕರ್ಮಿಗಳ ತಂಡವೊಂದು ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಗದಗ ತೋಂಟದಾರ್ಯ ಮಠದ ಬಳಿ ಗುರುವಾರ ತಡರಾತ್ರಿ ನಡೆದಿದೆ.

ಸುದೀಪ್ ಮುಂಡೆವಾಡಿ (27) ಹತ್ಯೆಯಾದ ಯುವಕ. 

ಆದಿತ್ಯ ಮುತಗಾರ ಎಂಬಾತ ಸೇರಿದಂತೆ ಐವರು ದುಷ್ಕರ್ಮಿಗಳ ತಂಡ ಹತ್ಯೆ ಮಾಡಿರುವುದಾಗಿ ಆರೋಪಿಸಲಾಗಿದೆ. ದುಷ್ಕರ್ಮಿಗಳು ಸುದೀಪ್ ಮುಂಡೆವಾಡಿಯ ಹೊಟ್ಟೆಯ ಭಾಗಕ್ಕೆ ಚೂರಿಯಿಂದ ಚುಚ್ಚಿದ್ದರು. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸುದೀಪ್ ಮುಂಡೆವಾಡಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. 

ಈ ಬಗ್ಗೆ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu