-->

ಬೆಂಗಳೂರು: ನಿವೃತ್ತ ಶಿಕ್ಷಕಿಯ ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

ಬೆಂಗಳೂರು: ನಿವೃತ್ತ ಶಿಕ್ಷಕಿಯ ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

ಬೆಂಗಳೂರು: ಮನಗೆ ನುಗ್ಗಿದ ದುಷ್ಕರ್ಮಿಗಳು ನಿವೃತ್ತ ಶಿಕ್ಷಕಿಯನ್ನು ಉಸಿರುಗಟ್ಟಿಸಿ ಹತ್ಯೆಮಾಡಿ ಚಿನ್ನಾಭರಣವನ್ನು ದೋಚಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಬೆಂಗಳೂರಿನ ಅಂಬಾಭವಾನಿ ದೇವಸ್ಥಾನದ ಬಳಿಯ ಪ್ರಸನ್ನ ಕುಮಾರಿ (60) ಹತ್ಯೆಯಾದ ನಿವೃತ್ತ ಶಿಕ್ಷಕಿ. 

ವಿಜಯವಾಡ ಮೂಲದ ಪ್ರಸನ್ನ ಕುಮಾರಿಯವರು ಚಿಂತಾಮಣಿಯ ಸರಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು.  ಇತ್ತೀಚಿಗೆ ಅವರು ನಿವೃತ್ತಿಯಾಗಿದ್ದರು. ನಿವೃತ್ತಿಯ ಬಳಿಕ ಒಂಟಿಯಾಗಿ ಜೀವನವನ್ನು ಸಾಗಿಸುತ್ತಿದ್ದ ಪ್ರಸನ್ನ ಕುಮಾರಿಯ ಮನೆಗೆ ನಿನ್ನೆ ರಾತ್ರಿ ಬಂದಿದ್ದ ದುಷ್ಕರ್ಮಿಗಳು ಆಕೆಯ ಕೈಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆಗೈದು ಮನೆಯಲ್ಲಿದ್ದ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ನಿನ್ನೆ ತಡರಾತ್ರಿ ಕೊಲೆ ನಡೆದಿರುವ ಬಗ್ಗೆ ಶಂಕಿಸಲಾಗಿದ್ದು, ಸದ್ಯ ಪ್ರಕರಣ ದಾಖಲಿಸಿಕೊಂಡ ವಿದ್ಯಾರಣ್ಯಪುರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article