-->

ಮಂಗಳೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗೆ ಮೂರು ವರ್ಷಗಳ ಸಾದಾ ಸಜೆ

ಮಂಗಳೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗೆ ಮೂರು ವರ್ಷಗಳ ಸಾದಾ ಸಜೆ

ಮಂಗಳೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ( ಪೊರೊ ) ಎಫ್‌ಟಿಎಸ್‌ - 1 ನ್ಯಾಯಾಲಯದಲ್ಲಿ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಾಮುಕನಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ವಿಧಿಸಲಾಗಿದೆ.

ಕೊಕ್ಕಡ ನಿವಾಸಿ ಪದ್ಮನಾಭ ಎಂಬಾತ ಶಿಕ್ಷೆಗೊಳಗಾದ ಅಪರಾಧಿ. 

2019ರ ಆ.17 ರಂದು ಅಪ್ರಾಪ್ತ ಬಾಲಕಿ ಶಾಲೆಯಿಂದ ಮನೆಗೆ ತೆರಳುತ್ತಿದ್ದಳು. ಈ ವೇಳೆ ಆರೋಪಿ ಪದ್ಮನಾಭ ಬಾಲಕಿಯನ್ನು ಅಡ್ಡಗಟ್ಟಿ ತಡೆದು ನಿಲ್ಲಿಸಿ ಆಕೆಯ ಕೈ ಹಿಡಿದು ಎಳೆದಿದ್ದ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಠಾಣಾ ನಿರೀಕ್ಷಕ ಎಲ್ ಚಂದ್ರಶೇಖರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. 

ಪ್ರಕರಣ ಕೈಗೆತ್ತಿಕೊಂಡು ವಿಚಾರಣೆ ನಡೆಸಿರುವ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ( ಪೊಕ್ಸೊ ) ಎಫ್‌ಟಿಎಸ್‌ - 1 ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಆರೋಪಿಗೆ ಪೊಕ್ಸೊ ಕಾಯ್ದೆಯ ಕಲಂ 12 ರಡಿ 3 ವರ್ಷ ಸಾದಾ ಸಜೆ ಮತ್ತು 500 ರೂ . ದಂಡ , ಐಪಿಸಿ ಸೆಕ್ಷನ್ 354 ( ಡಿ ) ಪ್ರಕಾರ 3 ವರ್ಷ ಸಾದಾ ಸಜೆ ಮತ್ತು 500 ರೂ ದಂಡ ಹಾಗೂ ಐಪಿಸಿ 341 ರಂತೆ 1 ವರ್ಷ ಸಜೆ ವಿಧಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶಿದ್ದಾರೆ.

ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.

Ads on article

Advertise in articles 1

advertising articles 2

Advertise under the article