ಅಹಮದಾಬಾದ್: ಭಾರತೀಯ ಕೋಸ್ಟ್‌ಗಾರ್ಡ್ ಸಿಬ್ಬಂದಿ ಹಾಗೂ ಭಯೋತ್ಪಾದನಾ ನಿಗ್ರಹದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಗುಜರಾತ್‌ನ ಕರಾವಳಿ ಭಾಗದಲ್ಲಿ ಪಾಕಿಸ್ತಾನದ ದೋಣಿಯಿಂದ 360 ಕೋಟಿ ರೂ. ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 
ಪಾಕಿಸ್ತಾನ ಮೂಲದ ಅಲ್ ಸಕರ್ ಎಂಬ ಬೋಟ್‌ನಲ್ಲಿ 50 ಕೆ.ಜಿ. ತೂಕದ ಹೆರಾಯಿನ್ ಅನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಲಭ್ಯವಾದ ಖಚಿತ ಮಾಹಿತಿಯ ಮೇರೆಗೆ ಕೋಸ್ಟ್ ಗಾರ್ಡ್ ಸಿಬ್ಬಂದಿ ದಾಳಿ ನಡೆಸಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ. ಅಲ್ಲದೆ ದೋಣಿಯಲ್ಲಿದ್ದ 6 ಜನರನ್ನು ಬಂಧಿಸಿದ್ದು. ವಿಚಾರಣೆಗೆ ಒಳಪಡಿಸಲಾಗಿದೆ. 
ಈ ಬೋಟ್ ಅನ್ನು ರಾಜ್ಯದ ಬಂದರಿಗೆ ತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.