ದೀಪಾವಳಿ ದಿನವೇ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಯುವಕರು ಮೃತ್ಯು: ಇಬ್ಬರು ಗಂಭೀರ ಗಾಯ

ಚಿತ್ರದುರ್ಗ: ದೀಪಾವಳಿ ಹಬ್ಬದಂದೇ ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ಭೀಕರ ಅಪಘಾತ ಸಂಭವಿಸಿ, ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಚಳ್ಳಕೆರೆ ತಾಲೂಕಿನ ಕಾಮಸಮುದ್ರ ಗ್ರಾಮದ ಕಾರು ಚಾಲಕ ಮನು (21) , ಚಿತ್ರದುರ್ಗ ತಾಲೂಕಿನ ಮೆದೇಹಳ್ಳಿ ಗ್ರಾಮದ ಹರೀಶ್ (25) ಮತ್ತು ಸಚಿನ್ (25) ಮೃತಪಟ್ಟ ದುರ್ದೈವಿಗಳು. 

ಇಂಡಿಕಾ ಕಾರಿನಲ್ಲಿ ಡ್ರೈವರ್ ಸೇರಿ ಐವರು ಪ್ರಯಾಣ ಮಾಡುತ್ತಿದ್ದರು. ಆದರೆ ಸೋಮವಾರ ಮಧ್ಯರಾತ್ರಿ ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಡು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.  

ದೀಪಾವಳಿ ಹಬ್ಬದ ಸಡಗರದಲ್ಲಿದ್ದ ಮನೆಯಲ್ಲಿ ಸೂತಕ ಆವರಿಸಿದ್ದು ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಬಗ್ಗೆ ಚಿತ್ರದುರ್ಗ ಸಂಚಾರಿ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.