ಮಂಗಳೂರು: ಶಾರದೋತ್ಸವದ ನಿಮಿತ್ತ ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಹಾಕಲಾಗಿದ್ದ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯ ಬ್ಯಾನರ್ ಅನ್ನು ಹರಿದಿರುವ ಮೂವರು ಕಿಡಿಗೇಡಿಗಳನ್ನು ಪತ್ತೆಹಚ್ಚಿ ಬಂಧಿಸಿರುವ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು, ಕೃತ್ಯಕ್ಕೆ ಬಳಸಿರುವ ಸ್ವಿಫ್ಟ್ ಕಾರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಬಂಧಿತ ಆರೋಪಿಗಳು.
ಅ.08ರ ಮಧ್ಯರಾತ್ರಿ 1-2 ಗಂಟೆಯ ಸಮಯದಲ್ಲಿ ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವಕ್ಕೆ ಸಂಬಂಧಿಸಿದಂತೆ ವಾಮಂಜೂರು ಫ್ರೆಂಡ್ಸ್ ಸಂಘಟನೆಯ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು. ಧಾರ್ಮಿಕ ಭಾವನೆಗಳಿಗೆ ಅಪಮಾನ ಮಾಡುವ ಉದ್ದೇಶದಿಂದ ಕೃತ್ಯವನ್ನು ಎಸಗಲಾಗಿದೆ ಎಂದು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಬ್ಯಾನರ್ ಹರಿದ ಕೃತ್ಯದ ಸಂಪೂರ್ಣ ದೃಶ್ಯ ಸ್ಥಳದಲ್ಲಿನ ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು. ಇದೀಗ ಪೊಲೀಸರು ಕೃತ್ಯ ಎಸಗಿರುವ ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಉಪಯೋಗಿಸಿದ ಸ್ವಿಫ್ಟ್ ಕಾರನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.