Bellaare - ಕಾಣಿಯೂರು ಹಲ್ಲೆ ಪ್ರಕರಣ. ಆರು ಆರೋಪಿಗಳ ಬಂಧನ.

ಕಡಬ

ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಲ್ಪಾಡಿ ಎಂಬಲ್ಲಿ ಇಬ್ಬರು ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆಯಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರನ್ನು ಪುನಿತ್, ರಾಜು, ಪ್ರಸಾದ್, ಕಿಶೋರ್, ಭವಿತ್, ರಂಜಿತ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 144, 341, 504, 323, 324, 427, 149ರಡಿ ಪ್ರಕರಣ ದಾಖಲಾಗಿದೆ.‌ ಈಗಾಗಲೇ ಹಲ್ಲೆಗೊಳಗಾದ ರಮೀಝುದ್ದೀನ್ ಮತ್ತು ರಫೀಕ್ ವಿರುದ್ಧ ಪರಿಶಿಷ್ಟ ಜಾತಿ, ಪಂಗಡ ತಡೆ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 448, 354, 341ರಡಿ ಪ್ರಕರಣ ದಾಖಲಿಸಲಾಗಿದೆ. ಈ ಇಬ್ಬರು ಆರೋಪಿಗಳು ಆಸ್ಪತ್ರೆಯಲ್ಲಿದ್ದು, ಪೊಲೀಸ್ ನಿಗಾದಲ್ಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu