ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ಸಹೋದರರು ಮೃತ್ಯು

ಬೆಳ್ತಂಗಡಿ: ಜ್ವರ ಬಳಲುತ್ತಿದ್ದ ಒಂದೇ ಮನೆಯ ಮಕ್ಕಳಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿಯ ಮದ್ದಡ್ಕದ ಲಾಡಿ ಎಂಬಲ್ಲಿ ಸಂಭವಿಸಿದೆ.

ಲಾಡಿ ಎಂಬಲ್ಲಿನ ನಿವಾಸಿ ಅಬ್ಬಾಸ್ ಎಂಬವರ ಪತ್ರರಾದ ಸಫ್ವಾನ್ ( 8 ) ಹಾಗೂ ಸಿನಾನ್ ( 4 ) ಮೃತಪಟ್ಟ ಮಕ್ಕಳು.


ಸಫ್ವಾನ್ ಹಾಗೂ ಸಿನಾನ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ಪಡೆದಿದ್ದ ಮಕ್ಕಳು ಜ್ವರದಿಂದ ಗುಣಮುಖರಾಗಿರಲಿಲ್ಲ. ಈ ನಡುವೆ ಇಬ್ಬರು ಮಕ್ಕಳಿಗೂ ಜ್ವರ ತೀವ್ರವಾಗಿ ಬಾಧಿಸಿದ್ದು ತಕ್ಷಣ  ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಓರ್ವ ಬಾಲಕ ನಿನ್ನೆ ರಾತ್ರಿ ಮೃತಪಟ್ಟಿದ್ದು ಇನ್ನೋರ್ವ ಬಾಲಕ ಇಂದು ಮೃತಪಟ್ಟಿದ್ದಾನೆ. ಮನೆಯ ಇಬ್ಬರು ಮಕ್ಕಳನ್ನೂ ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
BREAKING NEWS
Loading latest news...
Join our WhatsApp Channel Powered By : Online Pudu