ಬೆಳ್ತಂಗಡಿ: ಕಾಡುಪ್ರಾಣಿಗಳಿಗೆಂದು ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಗೊಂಡು ವ್ಯಕ್ತಿ ಸಾವು

ಬೆಳ್ತಂಗಡಿ: ಕಾಡುಪ್ರಾಣಿಗಳ ದಾಳಿಗೆ ತೋಟದಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ಕರಿಯನೆಲ ಎಂಬಲ್ಲಿ ರವಿವಾರ ಸಂಭವಿಸಿದೆ. 

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿಲ್ ನಿವಾಸಿ ಉದಯ ಗೌಡ ( 43 ) ಮೃತಪಟ್ಟವರು. ಉದಯಗೌಡ ತೋಟಕ್ಕೆಂದು ಹೋದವರು ಮನೆಗೆ ಹಿಂತಿರುಗಿ ಬಂದಿರಲಿಲ್ಲ‌. ಆದ್ದರಿಂದ ಮನೆಮಂದಿ ಸುತ್ತಮುತ್ತ ಹುಡುಕಾಟ ನಡೆಸಿದಾಗ ಸಂಜೆಯ ವೇಳೆ ತೋಟದಲ್ಲಿ ಅವರು ಮೃತಪಟ್ಟಿರುವುದು ಕಂಡು ಬಂದಿದೆ. 

ಸ್ಥಳೀಯ ನಿವಾಸಿಯಾಗಿರುವ ಹರೀಶ ಮತ್ತು ಇತರರು ಸೇರಿ ತೋಟಕ್ಕೆ ಬರುವ ಕಾಡು ಪ್ರಾಣಿಗಳ ದಾಳಿ ನಿವಾರಣೆಗೆ ಅಕ್ರಮವಾಗಿ ತಮ್ಮ ಪಂಪ್ ಶೆಡ್ ನಿಂದ ತೋಟದ ಸುತ್ತ ವಿದ್ಯುತ್ ತಂತಿಯನ್ನು ಅಳವಡಿಸಿದ್ದರು. ಜನರು ನಡೆದಾಡುವ ದಾರಿಯಲ್ಲಿಯೇ ಅತ್ಯಂತ ಅಪಾಯಕಾರಿಯಾಗಿ ವಿದ್ಯುತ್ ತಂತಿ ಅಳವಡಿಸಿದ್ದರು. ತೋಟಕ್ಕೆಂದು ಹೋದ ಉದಯ ಅವರ ಕಾಲಿಗೆ ವಿದ್ಯುತ್ ಹರಿಯುತ್ತಿದ್ದ ತಂತಿ ಸ್ಪರ್ಶಗೊಂಡು ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ದೂರು ನೀಡಲಾಗಿದೆ. 

ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷ ಶಿವಕುಮಾರ್ , ಧರ್ಮಸ್ಥಳ ಠಾಣಾಧಿಕಾರಿ ಅನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu