ಕಾರಿನಲ್ಲಿ ಅಳವಡಿಕೆಯಾಗಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ವ್ಯಕ್ತಿ ಸಜೀವ ದಹನ

ಕೊಯಮತ್ತೂರು: ನಗರದ ಉಕ್ಕಡಂ ಎಂಬಲ್ಲಿ ಕಾರಿನಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹತ್ತಿಕೊಂಡು ಕಾರಿನೊಳಗಿದ್ದ ವ್ಯಕ್ತಿ ಸುಟ್ಟು ಕರಕಲಾದ ಘಟನೆ ರವಿವಾರ ಮುಂಜಾನೆ ನಡೆದಿದೆ. 

ಮೃತಪಟ್ಟ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಇದೀಗ ಕೊಯಮತ್ತೂರಿನ ಪತ್ರ ಕೊಟ್ರೈ ಈಶ್ವರನ್ ದೇವಾಲಯದ ಸುತ್ತಮುತ್ತಲಿನ ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿದೆ. ಈ ಬಗ್ಗೆ ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಮು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಅಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ಎಡಿಜಿಪಿ ಪಿ.ತಾಮರೈ ಕಣ್ಣನ್ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. 

ಈ ಬಗ್ಗೆ ಮಾತನಾಡಿದ ಅವರು, ಸಾಕ್ಷ್ಯ ಸಂಗ್ರಹಿಸುವ ಪ್ರಕ್ರಿಯೆ ನಡೆಯುತ್ತಿದೆ.‌ ಪ್ರಕರಣದ ತನಿಖೆಗೆ ಆರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.