ನಿರ್ಮಾಣ ಹಂತದಲ್ಲೇ ಕುಸಿದು ಬಿದ್ದ ಮೇಲ್ಸೇತುವೆ: ಓರ್ವ ಕಾರ್ಮಿಕನಿಗೆ ಗಾಯ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆಯಲ್ಲಿ ನಿರ್ಮಿಸಲಾಗುತ್ತಿದ್ದ ರಸ್ತೆ ಮೇಲ್ಸೇತುವೆಯ ಕಾಂಕ್ರೀಟ್ ಕುಸಿದು ಬಿದ್ದು ಓರ್ವ ಕಾರ್ಮಿಕ ಗಾಯಗೊಂಡ ಘಟನೆ ಪೆರಿಯದಲ್ಲಿ ಇಂದು ಮುಂಜಾನೆ ನಡೆದಿದೆ. 

ಪೆರಿಯ ಪೇಟೆಯ ಬಳಿ ನಿರ್ಮಿಸಲಾಗುತ್ತಿದ್ದ ಸೇತುವೆಯ ಕಾಂಕ್ರೀಟ್ ಕುಸಿದು ಬಿದ್ದಿದೆ. ಈ ಘಟನೆ ನಡೆದ ಸಂದರ್ಭದಲ್ಲಿ ಐವರು ಕಾರ್ಮಿಕರಿದ್ದು, ಉಳಿದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ರಾತ್ರಿಯ ವೇಳೆಯೂ ಕಾಮಗಾರಿ ನಡೆಯುತ್ತಿದ್ದು,  ಅವೈಜ್ಞಾನಿಕ ಕಾಮಗಾರಿಯೇ ಘಟನೆಗೆ ಕಾರಣ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಈ ಬಗ್ಗೆ ಬೇಕಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಮೇಲ್ವೇತುವೆ ಕಾಮಗಾರಿ ಕುಸಿದು ಬಿದ್ದ ಬಗ್ಗೆ ತಪಾಸಣೆ ನಡೆಸಲಾಗುವುದು. ವರದಿ ಲಭಿಸಿದ ಬಳಿಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಲೋಕೋಪಯೋಗಿ ಸಚಿವೆ ಪಿ.ಎ. ಮುಹಮ್ಮದ್ ರಿಯಾಝ್ ತಿಳಿಸಿದ್ದಾರೆ. ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸುವಂತೆ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಒತ್ತಾಯಿಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu