ವೃಷಭ ರಾಶಿ: ಈ ರಾಶಿಯವರ ಆತ್ಮವಿಶ್ವಾಸ ಹೆಚ್ಚುತ್ತದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಹೊಸ ಉದ್ಯೋಗಾವಕಾಶಗಳು ದೊರೆಯಲಿವೆ. ವಿತ್ತೀಯ ಲಾಭದಿಂದ ಆದಾಯದಲ್ಲಿ ಹೆಚ್ಚಳ ಕಂಡುಬರಲಿದೆ. 

ಕರ್ಕಾಟಕ ರಾಶಿ: ಕರ್ಕಾಟಕ ರಾಶಿಯವರಿಗೆ ಶನಿಯು ಮಾರ್ಗದಲ್ಲಿ ಇರುವುದರಿಂದ ಶುಭ ಫಲಗಳು ದೊರೆಯುತ್ತವೆ. ಇದರಿಂದ ಅವರ ಮನಸ್ಸಿಗೆ ಸಂತೋಷವಾಗುತ್ತದೆ. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ಪೂರ್ಣಗೊಳ್ಳಲಿವೆ. ಈ ರಾಶಿಯ ವಿದ್ಯಾರ್ಥಿಗಳಿಗೆ ಸಮಯ ಅನುಕೂಲಕರವಾಗಿದೆ.


ಸಿಂಹ ರಾಶಿ: ಸಿಂಹ ರಾಶಿಯವರು ವಾಹನ ಮತ್ತು ಮನೆಯ ಸುಖವನ್ನು ಪಡೆಯಬಹುದು. ನೀವು ಬಹಳ ಸಮಯದಿಂದ ಯಾವುದಾದರೂ ಕೆಲಸ ಪ್ರಾರಭಿಸಲು ಯೋಜಿಸುತ್ತಿದ್ದರೆ ಅಥವಾ ಪೂರ್ಣಗೊಳಿಸಬಯಸಿದರೆ ಇದು ಅನುಕೂಲಕರ ಸಮಯ. ನೀವು ಪೋಷಕರಿಂದ ಆರ್ಥಿಕ ಸಹಾಯ  ಪಡೆಯುತ್ತೀರಿ. 


ತುಲಾ ರಾಶಿ: ನಿಮಗೆ ಕಚೇರಿ ಅಥವಾ ಕೆಲಸದ ಸ್ಥಳದಲ್ಲಿ ಅಧಿಕಾರಿಗಳ ಸಹಕಾರವಿರುತ್ತದೆ. ಉದ್ಯಮಿಗಳಿಗೆ ಇದು ಉತ್ತಮ ಸಮಯ. ವ್ಯವಹಾರದಲ್ಲಿ ಪ್ರಗತಿಯ ಸಾಧ್ಯತೆಗಳಿವೆ. ಸ್ನೇಹಿತರ ಬೆಂಬಲ ಸಿಗುತ್ತದೆ ಮತ್ತು ಆದಾಯ ಹೆಚ್ಚಾಗುತ್ತದೆ. 

ಮಕರ ರಾಶಿ: ಉದ್ಯೋಗದಲ್ಲಿ ವರ್ಗಾವಣೆಯಾಗುವ ಸಾಧ್ಯತೆಗಳಿವೆ. ಕೌಟುಂಬಿಕ ಜೀವನ ಮಧುರವಾಗಿ ಉಳಿಯುತ್ತದೆ. ಮಗುವಿನ ಕಡೆಯಿಂದ ಒಳ್ಳೆಯ ಸುದ್ದಿ ಬರಬಹುದು. ಆಸ್ತಿಯಲ್ಲಿ ಹೆಚ್ಚಳವಾಗುವ ಸಾಧ್ಯತೆಯೂ ಇದೆ. ಕೆಲಸದ ಸ್ಥಳದಲ್ಲಿ ಅಧಿಕಾರಿಗಳ ಸಹಕಾರವಿರುತ್ತದೆ. ನೀವು ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತರಾಗುತ್ತೀರಿ.


ಮೀನ ರಾಶಿ: ಹೊಸ ಆದಾಯದ ಮೂಲಗಳು ತೆರೆದುಕೊಳ್ಳುತ್ತವೆ. ಉದ್ಯೋಗದಲ್ಲಿ ಬಡ್ತಿ ದೊರೆಯಬಹುದು. ನಿಮಗೆ ಸಂಗಾತಿಯ ಬೆಂಬಲ ಸಿಗಲಿದೆ. ಇದರಿಂದಾಗಿ ಹಣಕಾಸಿನ ಸಮಸ್ಯೆಗಳು ನಿವಾರಣೆಯಾಗುತ್ತವೆ .