ಪ್ರವೀಣ್ ನೆಟ್ಟರು ಪತ್ನಿಗೆ ಸಿಎಂ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆ..!!


ಬೆಂಗಳೂರು: ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ  ಅವರು ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿಗೆ ತಮ್ಮ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿದ್ದರು. 


ಆ ಪ್ರಕಾರವಾಗಿ ಪ್ರವೀಣ್ ನೆಟ್ಟಾರು ಪತ್ನಿ ನೂತನಾಗೆ ಗ್ರೂಪ್ ಸಿ ಹುದ್ದೆ ನೀಡಲು ಸಿಎಂ ಕಚೇರಿ ಆದೇಶ ಹೊರಡಿಸಿದೆ.


ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಜುಲೈ 26 ರಂದು ತಮ್ಮ ಕೆಲಸ ಮುಗಿಸಿ ಮನೆ ಕಡೆಗೆ ಹೊರಟಿದ್ದ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು







BREAKING NEWS
Loading latest news...
Join our WhatsApp Channel Powered By : Online Pudu