ಮುಲ್ಕಿ‌: ಲವ್ ಜಿಹಾದ್ ಮಾಡಿದ್ದಾನೆಂದು ಆರೋಪಿಸಿ ವ್ಯಕ್ತಿಗೆ ಧರ್ಮದೇಟು ನೀಡಿ ಪೊಲೀಸ್ ಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಮಂಗಳೂರು: ಲವ್ ಜಿಹಾದ್ ಮಾಡಿದ್ದಾನೆಂದು ಆರೋಪಿಸಿ ವ್ಯಕ್ತಿಯೋರ್ವನಿಗೆ ಹಿಂದೂ ಕಾರ್ಯಕರ್ತರು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರು ನಗರದ ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುರತ್ಕಲ್ ಮೂಲದ ತೋಕೂರು ಬಳಿಯ ಬಾಡಿಗೆ ಮನೆ ನಿವಾಸಿ ಸಮೀರ್ ಬಂಧಿತ ಆರೋಪಿ.


ಸಮೀರ್ ಈಗಾಗಲೇ ವಿವಾಹವಾಗಿದ್ದಾನೆ. ಆದರೆ ಹಿಂದೂ ಯುವತಿ ಸವಿತಾ ಎಂಬಾಕೆಯನ್ನು ಪುಸಲಾಯಿಸಿ ತೋಕೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದಾನೆ ಎಂದು ಮಾಹಿತಿ ಲಭ್ಯವಾದಂತೆ ಹಿಂದೂ ಕಾರ್ಯಕರ್ತರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ಆತ ಲವ್ ಜಿಹಾದ್ ಮಾಡಿದ್ದಾನೆಂದು ಆರೋಪಿಸಿ ಧರ್ಮದೇಟು ನೀಡಿದ್ದಾರೆ. 

ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu