ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಯುವತಿಯ ಅಶ್ಲೀಲ ವೀಡಿಯೋ, ಫೋಟೋ ವಿಚಾರಕ್ಕೆ ನಡೆದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ


ಚಿಕ್ಕಬಳ್ಳಾಪುರ: ಸಹೋದರಿಯ ಬೆತ್ತಲೆ ಫೋಟೋ ವಿಚಾರದಲ್ಲಿ ನಡೆದಿರುವ ಜಗಳವು ಓರ್ವನ ಬರ್ಬರ ಹತ್ಯೆಯೊಂದಿಗೆ ಅಂತ್ಯಗೊಂಡ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ತನ್ನ ಸಹೋದರಿಯ ಅಶ್ಲೀಲ ವೀಡಿಯೋ ಹಾಗೂ ಫೋಟೋವನ್ನು ಹೊಂದಿದ್ದಕ್ಕೆ ಆಕ್ರೋಶಗೊಂಡಿದ್ದ ದರ್ಶನ್ ಎಂಬಾತ ತನ್ನ ಸಹಚರ ಆಶ್ರಯ್ ಜೊತೆ ಸೇರಿಕೊಂಡು ದೊಡ್ಡಬಳ್ಳಾಪುರ ಮೂಲದ ನಂದನ್ ಎಂಬಾತನನ್ನ ಬರ್ಬರವಾಗಿ ಕೊಲೆ ಮಾಡಿದ್ದಾನೆ.

ದೊಡ್ಡಬಳ್ಳಾಫುರ ಮೂಲದ ಯುವಕ ನಂದನ್ ನಲ್ಲಿ ಚಿಕ್ಕಬಳ್ಳಾಫುರ ತಾಲೂಕಿನ ಹಾರೋಬಂಡೆ ಗ್ರಾಮದ ದರ್ಶನ್ ಎಂಬ ಯುವಕನ ಸಹೋದರಿಯ ಅಶ್ಲೀಲ ವೀಡಿಯೋ ಹಾಗೂ ಫೋಟೋವನ್ನು ಹೊಂದಿದ್ದನು. ಈ ಸಂಬಂಧ ಇಬ್ಬರ ನಡುವೆ ಪದೇಪದೇ ಜಗಳ ನಡೆಯುತ್ತಿತ್ತು. ಇದೀಗ ಹಾರೋಬಂಡೆ ಗ್ರಾಮದ ಬಳಿ ನಂದನ್ ಹೆಣವಾಗಿ ಬಿದ್ದಿದ್ದಾನೆ. ವೀಡಿಯೋ, ಫೋಟೋ ವಿಚಾರಕ್ಕೆ ದ್ವೇಷದಿಂದ ದರ್ಶನ್ ಮತ್ತು ಆಶ್ರಯ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. 

ಸ್ಥಳಕ್ಕೆ ಚಿಕ್ಕಬಳ್ಳಾಫುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ‌.