ಮಂಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ; ರಸ್ತೆ ಅಪಘಾತಕ್ಕೊಳಗಿ ಮೃತಪಟ್ಟ ಯುವಕನ ಅಂಗಾಂಗ ದಾನ

ಮಂಗಳೂರು: ದ್ವಿಚಕ್ರ ವಾಹನ ಸ್ಕಿಡ್ ಆದ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವನು ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾನೆ. ಮನೆ ಮಗನನ್ನು ಕಳೆದುಕೊಂಡ ದುಃಖದ ನಡುವೆಯೂ ಆತನ ಅಂಗಾಂಗ ದಾನ ಮಾಡಿ ಆತನ ಸಾವನ್ನು ಸಾರ್ಥಕಗೊಳಿಸಿದ್ದಾರೆ.

ಮೂಡುಶೆಡ್ಡೆಯ ಗೌರವ್ ( 23 ) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಅ.25 ರಂದು ಮೂಡುಶೆಡ್ಡೆಯಲ್ಲಿ ಗೌರವ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವು ಸ್ಕಿಡ್ ಆಗಿತ್ತು. ಈ ವೇಳೆ ರಸ್ತೆಗೆ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 


ಅಂಗಾಂಗ ದಾನ: ಅಪಘಾತದಲ್ಲಿ ತೀವ್ರ ಗಾಯಗೊಂಡು ಬ್ರೈನ್ ಡೆಡ್ ಆಗಿದ್ದ ಗೌರವ್ ಅಂಗಾಂಗಗಳನ್ನು ಮನೆಯವರ ಇಚ್ಛೆಯಂತೆ ದಾನ ಮಾಡಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಯುವಕನ ಅಂಗಾಂಗ ದಾನ ಪ್ರಕ್ರಿಯೆ ನಡೆದಿದೆ. ಲಿವರ್ ಅನ್ನು ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ರವಾನಿಸಲಾದರೆ, ಒಂದು ಕಿಡ್ನಿಯನ್ನು ಎಜೆ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಅಳವಡಿಸಲಾಗಿದೆ. ಉಳಿದಂತೆ ಒಂದು ಕಿಡ್ನಿ ಅಂಬೇಡ್ಕರ್ ವೃತ್ತದ ಕೆಎಂಸಿ ಆಸ್ಪತ್ರೆಗೆ ಮತ್ತು 2 ಕಣ್ಣಿನ ಕಾರ್ನಿಯಾವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
BREAKING NEWS
Loading latest news...
Join our WhatsApp Channel Powered By : Online Pudu