ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಆರೋಗ್ಯ ಕೇಂದ್ರಕ್ಕೆ ನುಗ್ಗಿ ನರ್ಸ್ ಅನ್ನು ಕಟ್ಟಿಹಾಕಿ ಸಾಮೂಹಿಕ ಅತ್ಯಾಚಾರ: ನಾಲ್ವರು ಕಾಮುಕರಲ್ಲೋರ್ವ ಅಪ್ರಾಪ್ತ

ಭೋಪಾಲ್ : ಛತ್ತೀಸ್‌ಗಢದ ಆರೋಗ್ಯ ಕೇಂದ್ರವೊಂದರಲ್ಲಿ ನರ್ಸ್‌ ಓರ್ವರನ್ನು ಕಟ್ಟಿಹಾಕಿ, ನಾಲ್ವರು ಕಾಮುಕರು ಗ್ಯಾಂಗ್‌ರೇಪ್ ಮಾಡಿರುವ ಆತಂಕಕಾರಿ ಘಟನೆ ನಡೆದಿದೆ. ಈ ಆರೋಪಿಗಳ ಪೈಕಿ ಓರ್ವ ಅಪ್ರಾಪ್ತನಾಗಿದ್ದು, ಈತ ಸೇರಿ ಮೂವರು ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಆತನ ಪತ್ತೆ ಪೊಲೀಸರು ಬಲೆ ಬೀಸಿದ್ದಾರೆ. 

ಛತ್ತಿಸಗಢದ ಮಹೇಂದ್ರಗಢ ಜಿಲ್ಲೆಯ ಚಿಪ್ಟಿಪಿ ಗ್ರಾಮದಲ್ಲಿ ಈ ಘಟನೆ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿದೆ. ಆರೋಗ್ಯ ಕೇಂದ್ರದಲ್ಲಿ ಒಬ್ಬಂಟಿಯಾಗಿ ಕೆಲಸ ಮಾಡುತ್ತಿದ್ದ ಸಂತ್ರಸ್ತೆಯನ್ನು ಆರೋಪಿಯಲ್ಲೋರ್ವನು ಗಮನಿಸಿದ್ದಾನೆ. ದುರುದ್ದೇಶದಿಂದ ಆರೋಗ್ಯ ಕೇಂದ್ರಕ್ಕೆ ಪ್ರವೇಶಿಸಿದ್ದ ಆರೋಪಿಗಳು ನರ್ಸ ಅನ್ನು ಕಟ್ಟಿಹಾಕಿದ್ದಾರೆ. ಬಳಿಕ ಆಕೆಯ ಬಾಯಿಯನ್ನು ಬಟ್ಟೆಯಿಂದ ಬಿಗಿದು ಅತ್ಯಾಚಾರ ಎಸಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಎಸಗಿರುವ ವೀಡಿಯೊವನ್ನು ಕಾಮುಕರು ಸೆರೆ ಹಿಡಿದಿದ್ದಾರೆ. ಅಲ್ಲದೆ ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ನರ್ಸ್ ಆರೋಪಿಸಿದ್ದಾರೆ. ಈ ವಿಚಾರವನ್ನು ನರ್ಸ್ ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದರು. ಆರೋಗ್ಯ ಕಾರ್ಯಕರ್ತರ ತಂಡ, ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ ಇಂತಹ ಆರೋಗ್ಯ ಕಾರ್ಯಕರ್ತರಿಗೆ ಭದ್ರತೆಯನ್ನು ಒದಗಿಸುವಂತೆ ಛತ್ತೀಸ್‌ಗಢ ಸರಕಾರವನ್ನು ಒತ್ತಾಯಿಸಿದೆ.