ಮಂಗಳೂರು: ಆತ್ಮಹತ್ಯೆಗೈದಿರುವ ಸ್ಥಿತಿಯಲ್ಲಿ ದಂಪತಿ ಮೃತದೇಹ ಪತ್ತೆ

ಮಂಗಳೂರು: ನಗರದ ಮರೋಳಿಯಲ್ಲಿರುವ ತಮ್ಮ ನಿವಾಸದಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ದಾರುಣ ಘಟನೆಯೊಂದು ಸೋಮವಾರ ನಡೆದಿದೆ.

ಬೆಳಗಾವಿ ಮೂಲದ ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ (34) ಮತ್ತು ಬಿಕರ್ನಕಟ್ಟೆ ಸೌಮ್ಯ ನಾಯಕ್ (35) ಆತ್ಮಹತ್ಯೆಗೆ ಶರಣಾದ ದಂಪತಿ.

ಒಂದೂವರೆ ವರ್ಷದ ಹಿಂದೆ ಇಬ್ಬರೂ ವಿವಾಹವಾಗಿದ್ದರು. ಬಳಿಕ ಅವರು ಮರೋಳಿಯ ಅಪಾರ್ಟ್‌ಮೆಂಟ್‌ ಒಂದರಲ್ಲಿ ವಾಸವಿದ್ದರು. ದಂಪತಿ ಎರಡು ದಿನಗಳ ಹಿಂದೆಯಷ್ಟೇ ಮಡಿಕೇರಿಗೆ ಪ್ರವಾಸ ಹೋಗಿ ಮನೆಗೆ ವಾಪಸ್ ಆಗಿದ್ದರು ಎಂದು ತಿಳಿದು ಬಂದಿದೆ. ಆದರೆ ಇಂದು ಅವರಿಬ್ಬರ ಮೃತದೇಹ ಸ್ವಗೃಹದಲ್ಲಿ ಆತ್ಮಹತ್ಯೆಗೈದಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ದಂಪತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಂಕನಾಡಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu