ಪ್ರಖ್ಯಾತ ಕಿರುತೆರೆ ನಟಿ ನೇಣಿಗೆ ಶರಣು: ಡೆತ್ ನೋಟ್ ನಲ್ಲಿದೆ ಆತ್ಮಹತ್ಯೆಗೆ ಕಾರಣ


ಮಧ್ಯಪ್ರದೇಶ: ಪ್ರಖ್ಯಾತ ಕಿರುತೆರೆ ನಟಿಯೊಬ್ಬರ ಮೃತದೇಹ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರದ್ದೇ ಮನೆಯಲ್ಲಿ ಪತ್ತೆಯಾಗಿದೆ.

ಹಿಂದಿ ಭಾಷೆಯ ಪ್ರಖ್ಯಾತ ಕಿರುತೆರೆ ನಟಿ ವೈಶಾಲಿ ಟಕ್ಕರ್‌ (30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವವರು.

ಹಿಂದಿಯ 'ಸಸುರಲ್ ಸಿಮರ್ ಕಾʼ, ʼಯೇ ರಿಶ್ತಾ ಕ್ಯಾ ಕೆಹಲಾತಾ ಹೈ’ ಧಾರಾವಾಹಿಯಲ್ಲಿ ನಟಿಸಿ ಖ್ಯಾತರಾಗಿದ್ದಾರೆ. ಹಿಂದಿಯ ಬಿಗ್‌ ಬಾಸ್‌ ಸ್ಪರ್ಧಿಯಾಗಿ ಭಾಗಿಯಾಗಿದ್ದ ವೈಶಾಲಿ ಕಳೆದ ವರ್ಷದಿಂದ ಇಂದೋರ್‌ ನಲ್ಲಿರುವ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು. ಇದೀಗ ಅದೇ ಮನೆಯಲ್ಲಿ ಅವರ ಮೃತದೇಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿದೆ.

ಘಟನಾ ಸ್ಥಳದಲ್ಲಿ ಡೆತ್‌ ನೋಟ್‌ ಪತ್ತೆಯಾಗಿದೆ. ಅದರಲ್ಲಿ ಪ್ರೇಮದ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖವಾಗಿದೆ. ಈ ಬಗ್ಗೆ ತೇಜಾಜಿ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.