ಮಂಗಳೂರು: ಗುರುಪುರ ‌ಸೇತುವೆಯಿಂದ ನದಿಗೆ ಹಾರಿದ ಯುವಕ ನಾಪತ್ತೆ: ಪೊಲೀಸರಿಂದ ಶೋಧ ಕಾರ್ಯಾಚರಣೆ

ಮಂಗಳೂರು: ನಗರದ ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿರುವ ಯುವಕನೋರ್ವನು ನಾಪತ್ತೆಯಾಗಿದ್ದಾನೆ. ಈತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. 

ನಗರದ ಹೊರವಲಯದ ಮೂಡುಶೆಡ್ಡೆ ನಿವಾಸಿ ಅರುಣ್ ಕುಮಾರ್(35) ನದಿಗೆ ಹಾರಿ ನಾಪತ್ತೆಯಾದವರು.


ಅರುಣ್ ಕುಮಾರ್ ಅ.27ರಂದು ಸಂಜೆ 7ಗಂಟೆ ಸುಮಾರಿಗೆ ಫಲ್ಗುಣಿ ನದಿಗೆ ಹಾರಿದ್ದರು‌. ಇಂದು ಬೆಳಗ್ಗಿನಿಂದ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು ಈವರೆಗೆ ಅವರು ಪತ್ತೆಯಾಗಿಲ್ಲ. ಅರುಣ್ ಕುಮಾರ್ ವಿವಾಹಿತರಾಗಿದ್ದು, ಒಂದು ಮಗು ಕೂಡಾ ಇದೆ. ಅವರು ನದಿಗೆ ಹಾರಿರುವುದಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.