Sullya - ಪಿಸ್ತೂಲಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ. ಸುಳ್ಯದ ವ್ಯಕ್ತಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು.

ಸುಳ್ಯ

ಸುಳ್ಯದಲ್ಲಿ ವ್ಯಕ್ತಿಯೊಬ್ಬರು ಪಿಸ್ತೂಲಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಗುಂಡು ಹಾರಿಸಿಕೊಂಡ ವ್ಯಕ್ತಿ ಸುಳ್ಯ ನಗರ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಶಾಂತಿ ಪ್ರಭುರವರ ಪತಿ ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಎಂದು ತಿಳಿದು ಬಂದಿದೆ.

ಗಂಭೀರ ಸ್ಥಿತಿಯಲ್ಲಿರುವ ಕೇಶವ ಪ್ರಭು ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, 
ಇಂದು ಪೂರ್ವಾಹ್ನ 11 ಗಂಟೆಯ ಸುಮಾರಿಗೆ ಅವರ ಮನೆಯೊಳಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಗುಂಡು ಹಾರಿಸಿಕೊಳ್ಳಲು ಕಾರಣವೇನು ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ ಎನ್ನಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu