-->
17 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ವೀಡಿಯೋ ಶೇರ್ ಮಾಡಿದ ಐವರು ಸಹಪಾಠಿಗಳು

17 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ವೀಡಿಯೋ ಶೇರ್ ಮಾಡಿದ ಐವರು ಸಹಪಾಠಿಗಳು


ಹೈದರಾಬಾದ್ : 17 ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಅದರ ವೀಡಿಯೋವನ್ನು ವಾಟ್ಸ್ಆ್ಯಪ್ ನಲ್ಲಿ ಹರಿಯಬಿಟ್ಟ ಆರೋಪದಲ್ಲಿ ಆಕೆಯ ಐವರು ಸಹಪಾಠಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಾನೂನಿನ ಸಂಘರ್ಷಕ್ಕೊಳಗಾದ ಈ ಐವರು ಬಾಲಕರು 9 ಮತ್ತು 10ನೇ ತರಗತಿಯವರಾಗಿದ್ದಾರೆ. ಇವರು ತಮ್ಮ ಸಹಪಾಠಿಯ ಮೇಲೆಯೇ ಸಾಮೂಹಿಕ ಅತ್ಯಾಚಾರ ಎಸಗಿ, ಆ ದೃಶ್ಯವನ್ನು ವೀಡಿಯೊ ಚಿತ್ರೀಕರಣ ಮಾಡಿಕೊಂಡಿದ್ದರು. ಆ ಬಳಿಕ ವೀಡಿಯೋವನ್ನು ವಾಟ್ಸ್‌ ಆ್ಯಪ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ ಎಂದು ರಾಚಕೊಂಡ ಪೊಲೀಸ್ ಆಯುಕ್ತರು ಹೇಳಿದ್ದಾರೆ. 

ಕಳೆದ ಆಗಸ್ಟ್‌ನಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯಾರ್ಥಿನಿಯ ಮನೆಗೆ ಆಗಮಿಸಿದ ಈ ಐವರು ಬೆದರಿಕೆಯೊಡ್ಡಿ ಈ ಕೃತ್ಯ ಎಸಗಿದ್ದಾರೆ. ಬಳಿಕ ಈ ಘಟನೆಯನ್ನು ಚಿತ್ರೀಕರಿಸಿಕೊಂಡಿದ್ದು, ಆರೋಪಿಗಳ ಪೈಕಿ ಓರ್ವನು 10 ದಿನಗಳ ಬಳಿಕ ಮತ್ತೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವಿಚಾರವನ್ನು ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಬಳಿಕ ಹಯಾತ್‌ನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ವಿರುದ್ಧ ಪೋಕ್ಸೊ ಹಾಗೂ ಐಟಿ ಕಾಯ್ದೆಯ ಸೂಕ್ತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.  ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಮುಂದಿನ ಕ್ರಮಕ್ಕಾಗಿ ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಲಾಗಿದೆ.

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article