ಮಂಗಳೂರು: ಜ್ಯುವೆಲ್ಲರಿ ದರೋಡೆಗೆ ಸಂಚು ರೂಪಿಸಿದ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ನ 9 ಮಂದಿ ಸೆರೆ


ಮಂಗಳೂರು: ನಗರದ ತೊಕ್ಕೊಟ್ಟು ಬಳಿಯ ಜ್ಯುವೆಲ್ಲರಿ ದರೋಡೆಗೆ ಯತ್ನಿಸಿರುವ ಕುಖ್ಯಾತ ಅಂತಾರಾಜ್ಯ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ನ 9 ಮಂದಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗುಜರಾತ್ ರಾಜ್ಯದ ಭಾಸ್ಕರ ಬೆಳ್ಚಪಾಡ(65), ನೇಪಾಳ ರಾಜ್ಯದ ದಿನೇಶ್ ರಾವಲ್ ಅಲಿಯಾಸ್ ಸಾಗರ್ ಅಲಿಯಾಸ್ ದಿಲ್ಲಿ(38)‌ ಬಿಸ್ತ ರೂಪ್ ಸಿಂಗ್ (34),ಕೃಷ್ಣ ಬಹದ್ದೂರ್ ಬೋಗಟಿ, (41), ಜಾರ್ಖಂಡ್ ಮೂಲದ ಮೊಹಮ್ಮದ್ ಜಾಮೀಲ್ ಶೇಖ್(29), ಇಂಜಮಾಮ್ ಉಲ್ ಹಕ್(27), ಇಮ್ದದುಲ್ ರಝಾಕ್ ಶೇಖ್, (32),ಬಿವುಲ್ ಶೇಖ್ (31) ಇಮ್ರಾನ್ ಶೇಖ್ (30) ಬಂಧಿತ ದರೋಡೆಕೋರರು.

ಮಂಗಳೂರಿನ ತೊಕ್ಕೊಟ್ಟು ಮಂಚಿಲದ ಮನೆಯೊಂದರಲ್ಲಿ ಉತ್ತರ ಭಾರತದ ಕುಖ್ಯಾತ 'ಸಾಹೇಬ್ ಗಂಜ್ ದರೋಡೆ ಗ್ಯಾಂಗ್' ತಂಡದವರು ವಾಸವಿದ್ದರು. ಇವರು ತೊಕ್ಕೊಟ್ಟಿನ ಜ್ಯುವೆಲ್ಲರಿ ಅಂಗಡಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸುತ್ತಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಪೊಲೀಸರು  ದಾಳಿ ನಡೆಸಿ 9 ಮಂದಿಯನ್ನು ಬಂಧಿಸಿದ್ದಾರೆ.

ಇವರು ದರೋಡೆ ಮಾಡುವ ಉದ್ದೇಶದಿಂದ ಸುಮಾರು 15 ದಿನಗಳ ಹಿಂದೆ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದರು.  ಬಳಿಕ ತೊಕ್ಕೊಟ್ಟು ಬಳಿಯ ಲಾಡ್ಜ್ ವೊಂದರಲ್ಲಿ ಹಾಗೂ ತೊಕ್ಕೊಟ್ಟು ಮಂಚಿಲ ಬಳಿಯ ಮನೆಯೊಂದನ್ನು ಬಾಡಿಗೆಗೆ ಪಡೆದುಕೊಂಡು ಅಲ್ಲಿ ದರೋಡೆಗೆ ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ. ಇವರು ಜ್ಯುವೆಲ್ಲರಿ ದರೋಡೆಗೆ ಬೇಕಾದ ಗ್ಯಾಸ್ ಕಟ್ಟರ್, ಅಕ್ಸಿಜನ್ ಸಿಲಿಂಡರ್, ಗ್ಯಾಸ್ ಸಿಲಿಂಡರ್, ಗ್ಯಾಸ್ ಕಟ್ಟಿಂಗ್ ನೋಝಲ್, ಕಟ್ಟಿಂಗ್ ಹೋಸ್ ಪೈಪ್, ಲೆದರ್ ಹ್ಯಾಂಡ್ ಗ್ಲೌಸ್, ಕಬ್ಬಿಣದ ರಾಡ್, ತಲವಾರು, ಅಕ್ಸೋ ಬ್ಲೇಡ್, ಹ್ಯಾಮರ್, ಸ್ಕ್ರೂಡ್ರೈವರ್, ಮೆಣಸಿನ ಹುಡಿ, ನೈಲಾನ್ ಹಗ್ಗ ಹಾಗೂ ಇತರ ಹಲವಾರು ಸೊತ್ತುಗಳನ್ನು ಇವರು ಶೇಖರಿಸಿಕೊಂಡಿದ್ದರು.‌ ಆರೋಪಿಗಳಿಂದ ಈ ಎಲ್ಲಾ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಒಟ್ಟು ಮೌಲ್ಯ. 2,90,000 ರೂ. ಎಂದು ಅಂದಾಜಿಸಲಾಗಿದೆ.  ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BREAKING NEWS
Loading latest news...
Join our WhatsApp Channel Powered By : Online Pudu