ರಾತ್ರೋರಾತ್ರಿ ಬಿಜೆಪಿ ಮುಖಂಡ ಅರೆಸ್ಟ್


ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ನನ್ನು ಕಲಬುರಗಿಯ ಬ್ರಹ್ಮಪುರ ಪೊಲೀಸರು ಹೈದರಾಬಾದ್ ನಲ್ಲಿ‌ ಭಾನುವಾರ ತಡರಾತ್ರಿ ಬಂಧಿಸಿದ್ದಾರೆ.

ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆಯರನ್ನು ಶೂಟ್ ಮಾಡುವುದಾಗಿ ಮಣಿಕಂಠ ರಾಠೋಡ್ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದ್ದರಿಂದ ಮಣಿಕಂಠ ರಾಠೋಡ್ ನ ಬಂಧನಕ್ಕೆ ಆಗ್ರಹಿಸಿ ಕಲಬುರಗಿ ಎಸ್‌ಪಿ ಕಚೇರಿ ಮುಂಭಾಗ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಕೂಡ ನಡೆಸಿತ್ತು. ಸೋಮವಾರ ಕಲಬುರಗಿಗೆ ಆಗಮಿಸುತ್ತಿರುವ ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಕಪ್ಪುಪಟ್ಟಿ ಪ್ರದರ್ಶನ ಮಾಡುವುದಾಗಿ ಕಾಂಗ್ರೆಸ್ ಎಚ್ಚರಿಸಿತ್ತು. 

ಆದ್ದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿ ಮಣಿಕಂಠ ರಾಠೋಡ್‌ನನ್ನು ಬಂಧಿಸಿದೆ. ಹೈದರಾಬಾದ್ ನಲ್ಲಿ ಬಂಧಿಸಿರುವ ಪೊಲೀಸರು ಭಾನುವಾರ ತಡರಾತ್ರಿಯೇ ಮಣಿಕಂಠ ರಾಠೋಡ್‌ನನ್ನು ಕಲಬುರಗಿಗೆ ಕರೆತಂದಿದ್ದಾರೆ 
 ಕಲಬುರಗಿಗೆ ಕರೆತಂದಿದೆ .