-->
ಮಂಗಳೂರು: ಕೆಎಸ್ಆರ್ ಟಿಎಸ್ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ

ಮಂಗಳೂರು: ಕೆಎಸ್ಆರ್ ಟಿಎಸ್ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ

ಮಂಗಳೂರು: ನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿರುವ ಘಟನೆ ಇಂದು ಮಧ್ಯಾಹ್ನದ ವೇಳೆ ನಡೆದಿದೆ.

ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಒಳಗಡೆ ಅನುಮಾನಾಸ್ಪದ ರೀತಿಯಲ್ಲಿ ಈ ಬ್ಯಾಗ್ ಪತ್ತೆಯಾಗಿದೆ. ಬ್ಯಾಗ್ ನ ವಾರಸುದಾರರು ಇಲ್ಲದಿರುವ ಹಿನ್ನೆಲೆಯಲ್ಲಿ ಅಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಬಾಂಬ್ ಸ್ಕಾಡ್, ಶ್ವಾನದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ. ಆದರೆ ಅಷ್ಟರಲ್ಲಾಗಲೇ ಬ್ಯಾಗ್ ನ ವಾರಸುದಾರ ಪತ್ತೆಯಾಗಿದ್ದಾರೆ. 

ಆ ಬಳಿಕ ಆ ಬ್ಯಾಗ್ ಅಲ್ಲಿದ್ದ ಓರ್ವ ಪ್ರಯಾಣಿಕನ ಬ್ಯಾಗ್ ಎಂದು ತಿಳಿದು ಬಂದಿದೆ. ಅನುಮಾನಾಸ್ಪದ ಬ್ಯಾಗ್ ನ ಪತ್ತೆಯಾಗುತ್ತಲೇ ಕೊಂಚ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಪ್ರಕರಣದ ಸತ್ಯಾಸತ್ಯಾತೆ ತಿಳಿದು ಪರಿಸ್ಥಿತಿ ನಿರಾಳವಾಗಿದೆ.

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article