-->
ಕುಕ್ಕೆ ಸುಬ್ರಮಣ್ಯ ಚಂಪಾಷಷ್ಠಿ ಹಿನ್ನಲೆ.ರಾಜಬೀದಿಯಲ್ಲಿ ಆರಂಭವಾದ ಉರುಳುಸೇವೆ..

ಕುಕ್ಕೆ ಸುಬ್ರಮಣ್ಯ ಚಂಪಾಷಷ್ಠಿ ಹಿನ್ನಲೆ.ರಾಜಬೀದಿಯಲ್ಲಿ ಆರಂಭವಾದ ಉರುಳುಸೇವೆ..

ಸುಬ್ರಹ್ಮಣ್ಯ

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಸಲ್ಲಿಸುವ ವಿಶಿಷ್ಠ ಸೇವೆಯಲ್ಲೊಂದಾದ ಬೀದಿ ಉರುಳು ಸೇವೆಯು  ಸುಬ್ರಹ್ಮಣ್ಯದಲ್ಲಿ ಬುಧವಾರ ರಾತ್ರಿ ಲಕ್ಷದೀಪೋತ್ಸವದ ರಥೋತ್ಸವದ ಬಳಿಕ ಭಕ್ತರು ಆರಂಭಿಸಿದರು.

ಇಂದು ಮುಂಜಾನೆ ಮತ್ತು ಸಂಜೆ ಕೆಲವು ಭಕ್ತರು ಸೇವೆ ನೆರವೇರಿಸಿದ್ದಾರೆ. ಭಕ್ತರು ಈ ಸೇವೆಯನ್ನು ಚಂಪಾಷಷ್ಠಿಯಂದು ಮಹಾರಥೋತ್ಸವ ಎಳೆಯುವ ತನಕವೂ ನೆರವೇರಿಸುತ್ತಾರೆ. ವಾರ್ಷಿಕ ಜಾತ್ರೋತ್ಸವದ ಪ್ರಧಾನ ದಿನವಾದ ಚೌತಿ, ಪಂಚಮಿಯಂದು ಅಧಿಕ ಸಂಖ್ಯೆಯಲ್ಲಿ ಭಕ್ತರು ಉರುಳು ಸೇವೆ ನೆರವೇರಿಸುತ್ತಾರೆ. ಉರುಳು ಸೇವೆ ಮಾಡುವ ಭಕ್ತರು ಇಲ್ಲಿನ ಕುಮಾರಧಾರ ನದಿಯಲ್ಲಿ ಸ್ನಾನ ಮಾಡಿ ಅಲ್ಲಿಂದ ರಾಜರಸ್ತೆ, ರಥಬೀದಿ ಯಲ್ಲಿ ಉರುಳಿಕೊಂಡು ದೇವಳಕ್ಕೆ ಬಂದು ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕಿ ಮೂಡು ಬಾಗಿಲಿನಲ್ಲಿ ಹೊರ ಹೋಗಿ ಎದುರಿನ ದರ್ಪಣ ತೀರ್ಥ ನದಿಯಲ್ಲಿ ಸ್ನಾನ ಮಾಡಿ ಬಂದು ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ.
ಈ ಸೇವೆಗೆ ಯಾವುದೇ ಪ್ರತ್ಯೇಕ ರಶೀದಿ ಇಲ್ಲದಿದ್ದರೂ ಭಕ್ತರಿಗೆ ಇದಕ್ಕಾಗಿ ಶ್ರೀ ದೇವಳದಿಂದ ಸಕಲ ಅನುಕೂಲತೆಗಳನ್ನು ಮಾಡಲಾಗಿದೆ. ಕುಮಾರಧಾರದಿಂದ ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಿತವಾಗಿರುವ ಕಾರಣ ಇದರಲ್ಲಿ ಒಂದು ಭಾಗವನ್ನು ಉರುಳು ಸೇವೆಗಾಗಿಯೇ ವ್ಯವಸ್ಥೆಗೊಳಿಸಲಾಗಿದೆ. ಇದರಲ್ಲಿ ವಾಹನ ಸಂಚಾರಕ್ಕೆ ಅವಕಾವಿಲ್ಲ. ಅಲ್ಲದೆ ರಸ್ತೆಯ ಇಕ್ಕೆಲದಲ್ಲಿ ವಾಹನ ನಿಲುಗಡೆಗೆ ಕೂಡಾ ಅವಕಾಶ ನೀಡಲಾಗುತ್ತಿಲ್ಲ. ರಸ್ತೆಯ ಉದ್ದಕ್ಕೂ ಅಲ್ಲಲ್ಲಿ ಸೂಚನಾ ಫಲಕಗಳನ್ನು ವ್ಯವಸ್ಥೆ ಮಾಡಲಾಗಿದೆ.ರಾತ್ರಿ ಉರುಳು ಸೇವೆಗಾಗಿ ಕುಮಾರಧಾರದಿಂದ ಕುಕ್ಕೆಯ ತನಕ ವಿದ್ಯುತ್ ಬೆಳಕಿನ ಸೌಕರ್ಯವನ್ನು ವ್ಯವಸ್ಥೆಗೊಳಿಸಲಾಗಿದೆ. ಅಲ್ಲದೆ ಶ್ರೀ ದೇವಳದಿಂದ ಪ್ರತಿನಿತ್ಯ ರಸ್ತೆಯನ್ನು ಗುಡಿಸಿ ಸ್ವಚ್ಚ ಮಾಡಿ ರಸ್ತೆಯಲ್ಲಿನ ದೂಳು ತೆಗೆಯುವ ಕಾರ್ಯವು ನಡೆಯುತ್ತಿದೆ. ಈ ಪಥವನ್ನು ನಿರಂತರವಾಗಿ ಗುಡಿಸಿ ಸ್ವಚ್ಚಗೊಳಿಸುವ ಕಾರ್ಯ ನಡೆಯುತ್ತಿದೆ. ಆಗಾಗ್ಗೆ ನೀರನ್ನು ಹಾಕಿ ಶುಚಿಗೊಳಿಸಲಾಗುತ್ತಿದೆ. ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಭಕ್ತರು ಈ ಪಥವನ್ನು ಗುಡಿಸಿ ಶುಚಿಗೊಳಿಸುವ ಕಾರ್ಯವನ್ನು ದಿನ ನಿತ್ಯ ಮಾಡುತ್ತಿದ್ದಾರೆ. ಉರುಳು ಸೇವೆ ಮಾಡುವವರು ಮೊದಲೇ ಅನೇಕ ದಿನಗಳಿಂದ ವೃತವನ್ನು ಕೈಗೊಂಡಿರುತ್ತಾರೆ.ಅತ್ಯಂತ ಕಠಿಣವಾದ ಈ ಸೇವೆಯಲ್ಲಿ ಭಕ್ತರ ಅಪಾರ ಶ್ರದ್ಧೆ ಅಡಗಿರುತ್ತದೆ.ಕುಮಾರಧಾರಾದಿಂದ ಸುಮಾರು 2 ಕಿ.ಮಿ ದೂರ ಕಠಿಣವಾದ ಉರುಳು ಸೇವೆ ಮಾಡಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ಪ್ರಾರ್ಥಿಸುತ್ತಾರೆ.  ಶ್ರೀ ದೇವರನ್ನು ಆರಾಧಿಸುವ ಕಠಿಣ ಹಾಗೂ ವಿಶಿಷ್ಟ ಸೇವೆ ಇದಾಗಿದ್ದು ಪುರುಷ, ಮಹಿಳೆ, ಮಕ್ಕಳು ಹಾಗೂ ವೃದ್ದರೂ ಈ ಸೇವೆಯನ್ನು ಮಾಡುತ್ತಿದ್ದು ಅನೇಕ ವರ್ಷಗಳಿಂದ ಸತತವಾಗಿ ಈ ಕಠಿಣವಾದ ಸೇವೆಯನ್ನು ಸಲ್ಲಿಸುವ ಹಲವು ಭಕ್ತರಿದ್ದಾರೆ. ಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಉರುಳು ಸೇವೆ ಮುಖ್ಯ ಹರಿಕೆಗಳಲ್ಲಿ ಒಂದಾಗಿ ಪರಿಗಣಿತವಾಗಿದೆ.

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article