ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತ್ಯು


ಬಂಟ್ವಾಳ: ಬೈಕ್ ಸ್ಕಿಡ್ ಆಗಿರುವ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ.

ಬ್ರಹ್ಮರಕೂಟ್ಟು ಕಳ್ಳಿಗೆ ನಿವಾಸಿ ಮುಝಮ್ಮಿಲ್ ಮೃತ ಯುವಕ.

ನ.9ರಂದು ರಾತ್ರಿ ವೇಳೆ ಬಂಟ್ವಾಳ ತಾಲೂಕು ತುಂಬೆ ಗ್ರಾಮದ ರಾಮಲ್ ಕಟ್ಟೆ ಎಂಬಲ್ಲಿ‌ ಮುಝಮ್ಮಿಲ್ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಅವರ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ.

ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu