ಹೊಟ್ಟೆನೋವೆಂದು ಆಸ್ಪತ್ರೆಗೆ ‌ಬಂದಿದ್ದ ಬಾಲಕಿ ಆಸ್ಪತ್ರೆಯ ಶೌಚದಲ್ಲಿಯೇ ಗಂಡು ಮಗುವಿಗೆ ಹೆರಿಗೆ


ಕೊಚ್ಚಿ : ಹೊಟ್ಟೆನೋವೆಂದು ವೈದ್ಯರಲ್ಲಿಗೆ ತಪಾಸಣೆಗೆ ಬಂದಿದ್ದ ಅಪ್ರಾಪ್ತ ಬಾಲಕಿ ಆಸ್ಪತ್ರೆಯಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕಣ್ಣೂರು ಜಿಲ್ಲೆಯ ಇರಿಟ್ಟಿಯಲ್ಲಿ ನಡೆದಿದೆ.

ಹೊಟ್ಟೆನೋವು ಎಂದು ವೈದ್ಯರನ್ನು ಕಾಣಲು ಆಸ್ಪತ್ರೆಗೆ ಬಂದಿದ್ದ ಈಕೆ ಆಸ್ಪತ್ರೆಯ ಶೌಚಾಲಯಕ್ಕೆ ತೆರಳಿದ್ದಾಳೆ. ಅಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಆಸ್ಪತ್ರೆಯ ಸಿಬ್ಬಂದಿಗೆ ಯುವತಿಗೆ ಹೆರಿಗೆಯಾಗಿರುವುದು ಗಮನಕ್ಕೆ ಬಂದಿದೆ. ತಕ್ಷಣ ಆಕೆಯ ಹಾಗೂ ಶಿಶುವಿನ ಆರೋಗ್ಯವನ್ನು ವೈದ್ಯರು ಪರಿಶೀಲಿಸಿ, ಕಣ್ಣೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಬಗ್ಗೆ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಈ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಶೋಷಣೆ ನಡೆದಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu