ವಿಟ್ಲ: ಕೆಲಸಕ್ಕೆಂದು ತೆರಳಿದ್ದ ವಿವಾಹಿತೆ ನಾಪತ್ತೆ

ವಿಟ್ಲ: ವಿಟ್ಲ ಪೇಟೆಯಲ್ಲಿನ‌ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ವಿವಾಹಿತ ಯುವತಿಯೋರ್ವಳು‌ ಅ.29ರಿಂದ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ಮನೆಯವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.

ವಿಟ್ಲಪಟ್ನೂರು ಗ್ರಾಮದ ಕಡಂಬು ನಿವಾಸಿ ಕವಿತಾ (29) ನಾಪತ್ತೆಯಾದ ಮಹಿಳೆ. ಕೆಲಸ ಮುಗಿಸಿ, ಸಂಜೆ ತಾಯಿ ಮನೆಗೆ ಹೋಗುತ್ತೇನೆಂದು ಬೆಳಗ್ಗೆ ಮನೆಯಲ್ಲಿ ಹೇಳಿದ್ದರು. ಆದರೆ ಆಕೆ ತಾಯಿ ಮನೆಗೆ ತೆರಳದೆ ನಾಪತ್ತೆಯಾಗಿದ್ದಾರೆ.

ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ಎಲ್ಲಿ ಹುಡುಕಾಡಿದರೂ ಕವಿತಾ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu