ಮಾರಕಾಯುಧದಿಂದ ಇರಿದು ವಿದ್ಯಾರ್ಥಿಯ ಹತ್ಯೆ

ಕಲಬುರಗಿ: ವಿದ್ಯಾರ್ಥಿಯೋರ್ವನನ್ನು ಮಾರಾಕಾಯುಧದಿಂದ ಇರಿದು ಹತ್ಯೆ ಮಾಡಿರುವ ಘಟನೆ ಕಲಬುರಗಿಯ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಕಲಬುರಗಿ ನಗರದ ನಿವಾಸಿ, ಇಲ್ಲಿನ ಶರಣ ಬಸಪ್ಪ ಅಪ್ಪಾ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಮೊಹಮ್ಮದ್ ಮುದಸ್ಸಿರ್ (19) ಹತ್ಯೆಯಾದ ವಿದ್ಯಾರ್ಥಿ. ಈತನನ್ನು ಛೋಟಾ ರೋಜಾ ಬಡಾವಣೆಯ ಬೌವುಲಿಗಲ್ಲಿಯ ಅಮಿರ್ ಗುಲಶನ್ ಫಂಕ್ಷನ್ ಹಾಲ್ ಬಳಿ ದುಷ್ಕರ್ಮಿಗಳು ಮಾರಾಕಾಯುಧದಿಂದ ಇರಿದು ಪರಾರಿಯಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡ ಮುದಸ್ಸಿರ್ ನನ್ನು ತಕ್ಷಣ ಮಣೂರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಗೆ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.