ಬೆಳ್ತಂಗಡಿಯಲ್ಲಿ ಸದ್ದು ಮಾಡಿದ ಸ್ಯಾಟಲೈಟ್ ಕರೆ: ಪೊಲೀಸ್ ತನಿಖೆ ಚುರುಕು


ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಸ್ಯಾಟಲೈಟ್ ಕರೆ ಸದ್ದು ಮಾಡಿದೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರ ತನಿಖೆಯನ್ನು ಚುರುಕುಗೊಳಿಸಿದ್ದಾರೆ

ಧರ್ಮಸ್ಥಳ ಠಾಣಾ ಪಿಎಸ್ಐ ಅನಿಲ್ ಕುಮಾರ್ ತಂಡದಿಂದ ಬೆಂದ್ರಾಳ ಪ್ರದೇಶದಲ್ಲಿ ಪರಿಶೀಲನೆ ನಡೆಯುತ್ತಿದೆ. ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶ ಬೆಂದ್ರಾಳ ಸುತ್ತಮುತ್ತ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಮಾಹಿತಿ ಹಿನ್ನಲೆಯಲ್ಲಿ ತನಿಖೆಯಾಗ್ತಿದೆ. ಮಂಗಳೂರು ಬಾಂಬ್ ಬ್ಲಾಸ್ಟ್ ಹಿಂದಿನ ದಿನ ಸ್ಯಾಟಲೈಟ್ ಕರೆ ಸದ್ದು ಮಾಡಿತ್ತು‌ ಎಂದು ತಿಳಿದು ಬಂದಿದೆ. ಆದ್ದರಿಂದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.