ದೇರಳಕಟ್ಟೆ: ದ್ವಿಚಕ್ರ ವಾಹನದಲ್ಲಿ ಬಂದ ಆಗಂತುಕರಿಂದ ನರ್ಸಿಂಗ್ ವಿದ್ಯಾರ್ಥಿನಿ ಮೊಬೈಲ್ ಕಳವು

ದೇರಳಕಟ್ಟೆ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿಯ ಮೊಬೈಲ್ ಅನ್ನು ಆಗಂತುಕರಿಬ್ಬರು ಕಸಿದು ಪರಾರಿಯಾದ ಘಟನೆ ತೊಕ್ಕೊಟ್ಟು ಮಂಗಳೂರು ವಿವಿಯ ದೇರಳಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮುಂಭಾಗ ನಡೆದಿದೆ. 

ಕುನ್ಸಾಂಗ್ ಲಚಿಕ್ ಎಂಬವರು ಮೊಬೈಲ್ ಕಳೆದುಕೊಂಡ ನರ್ಸಿಂಗ್ ವಿದ್ಯಾರ್ಥಿನಿ. ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್ ಮಾಡಿತ್ತಿದ್ದ ಈ ವಿದ್ಯಾರ್ಥಿನಿ ತನ್ನ ಸಹಪಾಠಿಗಳೊಂದಿಗೆ ದೇರಳಕಟ್ಟೆಯಲ್ಲಿ ಶಾಪಿಂಗ್ ನಡೆಸಿ ಹಾಸ್ಟೆಲ್ ಕಡೆ ತೆರಳುತ್ತಿದ್ದರು. ಈ ವೇಳೆ ಆಗಂತುಕರಿಬ್ಬರು ಸ್ಕೂಟರ್ ನಲ್ಲಿ ಬಂದು ಮೊಬೈಲ್ ಕಸಿದು ಪರಾರಿಯಾಗಿದ್ದಾರೆ.

ಈ ಬಗ್ಗೆ ವಿದ್ಯಾರ್ಥಿನಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu