-->
1000938341
ಮಂಗಳೂರು: ಅನ್ಯಕೋಮಿನ ಯುವಕನಿಗೆ ಥಳಿಸಿದ ಬಜರಂಗದಳದ ಕಾರ್ಯಕರ್ತರ ಮೇಲೆ ಕಾನೂನು ಕ್ರಮ; ಎಡಿಜಿಪಿ ಟ್ವೀಟ್

ಮಂಗಳೂರು: ಅನ್ಯಕೋಮಿನ ಯುವಕನಿಗೆ ಥಳಿಸಿದ ಬಜರಂಗದಳದ ಕಾರ್ಯಕರ್ತರ ಮೇಲೆ ಕಾನೂನು ಕ್ರಮ; ಎಡಿಜಿಪಿ ಟ್ವೀಟ್

ಮಂಗಳೂರು: ಖಾಸಗಿ ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿಯೊಬ್ಬ ಹಿಂದೂ ಯುವತಿಯೊಂದಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ನಗರದ ನಂತೂರಿನಲ್ಲಿ ಹಲ್ಲೆ ನಡೆಸಿರುವ ಬಗ್ಗೆ ಟ್ವೀಟ್ ಮೂಲಕ ಗಮನ ಸೆಳೆದಿರುವುದಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಅವರು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮರು ಟ್ವೀಟ್ ಮಾಡಿದ್ದಾರೆ. 


ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಅನ್ಯಕೋಮಿನ ಯುವಕ ಹಾಗೂ ಹಿಂದೂ ಯುವತಿ ಜೋಡಿ ಪ್ರಯಾಣಿಸುತ್ತಿತ್ತು. ಬಸ್ ನಂತೂರು ತಲುಪುತ್ತಿದ್ದಂತೆ ಬಜರಂಗದಳದ ಕಾರ್ಯಕರ್ತರು 3-4 ಮಂದಿ ಬಸ್ಸಿನೊಳಗೆ ನುಗ್ಗಿದ್ದಾರೆ. ಏಕಾಏಕಿಯಾಗಿ ವಿದ್ಯಾರ್ಥಿಯನ್ನು ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣೆ ಮತ್ತು ಬೆತ್ತದಿಂದ ಹಲ್ಲೆ ನಡೆಸಿದ್ದಾರೆ ಎಂದು ಕದ್ರಿ ಠಾಣೆಯಲ್ಲಿ ದೂರು ನೀಡಲಾಗಿತ್ತು.


ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿತ್ತು. ಆದರೆ ಸ್ಥಳೀಯ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಇಮ್ರಾನ್ ಖಾನ್ ಎಂಬವರು ಟ್ವೀಟ್ ಮಾಡಿ ಗಮನಸೆಳೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ  ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ನಲ್ಲಿಯೇ ಈ ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article