16ರ ಬಾಲಕಿಯ ಸಾಮೂಹಿಕ ಅತ್ಯಾಚಾರ: ಮೂರು ಮಂದಿ ಅಪ್ರಾಪ್ತರ ಸಹಿತ ಆರು ಮಂದಿ ಅರೆಸ್ಟ್


ಮುಂಬೈ: ಮಧ್ಯ ಮುಂಬೈನ ಲೋವರ್ ಪರೇಲ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ 16 ವರ್ಷದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪದಲ್ಲಿ ಮೂವರು ಅಪ್ರಾಪ್ತರ ಸಹಿತ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಲ್ಲೋರ್ವನು ಸಂತ್ರಸ್ತೆಯ ಸ್ನೇಹಿತನಾಗಿದ್ದಾನೆ. ಹುಟ್ಟುಹಬ್ಬವನ್ನು ಆಚರಿಸಲು ಅವರು ಸೇರಿದ್ದರು. ಬಾಲಕಿ ಸೇರಿದಂತೆ ಆರು ಮಂದಿ ಆರೋಪಿಗಳೂ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ರಾತ್ರಿ ವೇಳೆ ಬಾಲಕಿಯ ಆಕ್ರಂದನ ಕೇಳಿ ಚಾಲ್ ನಿವಾಸಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಎನ್‌ಎಂ ಜೋಶಿ ಮಾರ್ಗ ಪೊಲೀಸ್ ಠಾಣೆಯ ಸಿಬ್ಬಂದಿ ಅಪ್ರಾಪ್ತೆ ಮತ್ತು ಆರೋಪಿಗಳನ್ನು ಪತ್ತೆ ಮಾಡಿದ್ದಾರೆ.

ಆದರೆ ಬಾಲಕಿ ನೀಡಿರುವ ದೂರಿನನ್ವಯ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ  ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.