-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಅತ್ಯಾಚಾರಕ್ಕೊಳಗಾದ 16ರ ಬಾಲಕಿ ಗರ್ಭಿಣಿ

ಅತ್ಯಾಚಾರಕ್ಕೊಳಗಾದ 16ರ ಬಾಲಕಿ ಗರ್ಭಿಣಿ


ಯಳಂದೂರು: ಇಲ್ಲಿನ ಕೋಳಿಫಾರ್ಮ್‌ವೊಂದರಲ್ಲಿ ಕುಟುಂಬದೊಂದಿಗೆ ವಾಸವಿದ್ದ 16ರ ಬಾಲಕಿಯ ಮೇಲೆ 3 ತಿಂಗಳ ಹಿಂದೆ ಅತ್ಯಾಚಾರಗಕ್ಕೊಳಗಾಗಿ ಗರ್ಭಿಣಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಿಹಾರ ಮೂಲದ ಕೂಲಿ ಕಾರ್ಮಿಕರು ಯಳಂದೂರು ತಾಲೂಕಿನ ಹೊನ್ನೂರು ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿನ ಕೋಳಿಫಾರ್ಮ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ದಂಪತಿಗೆ ಐವರು ಮಕ್ಕಳಿದ್ದಾರೆ. ಈ ಬಾಲಕಿಯೇ ದೊಡ್ಡವಳು ಎಂದು ತಿಳಿದು ಬಂದಿದೆ.

ಬಾಲಕಿಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಂದೆ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ತಪಾಸಣೆ ವೇಳೆ ಬಾಲಕಿ 3 ತಿಂಗಳ ಗರ್ಭಿಣಿಯಾಗಿದ್ದಾಳೆಂದು ಬೆಳಕಿಗೆ ಬಂದಿದೆ. ಬಳಿಕ ಚಾಮರಾಜನಗರ ಜಿಲ್ಲಾ ಮಹಿಳಾ ಸಾಂತ್ವನ ಕೇಂದ್ರಕ್ಕೆ ಮಾಹಿತಿ ನೀಡಿ ಕುಟುಂಬದೊಂದಿಗೆ ಆಪ್ತ ಸಮಾಲೋಚನೆ ನಡೆಸಲಾಗಿದೆ. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ