-->
ಮಂಗಳೂರು: ಉಳ್ಳಾಲ, ಬಂಟ್ವಾಳದಲ್ಲಿ ಸ್ಪರ್ಧಿಸುತ್ತಾರಾ ಅಬ್ದುಲ್ ಮಜೀದ್?: ದ.ಕ.ದ 8 ಕ್ಷೇತ್ರಗಳಲ್ಲೂ ಎಸ್ ಡಿಪಿಐ ಫೈಟ್

ಮಂಗಳೂರು: ಉಳ್ಳಾಲ, ಬಂಟ್ವಾಳದಲ್ಲಿ ಸ್ಪರ್ಧಿಸುತ್ತಾರಾ ಅಬ್ದುಲ್ ಮಜೀದ್?: ದ.ಕ.ದ 8 ಕ್ಷೇತ್ರಗಳಲ್ಲೂ ಎಸ್ ಡಿಪಿಐ ಫೈಟ್

ಮಂಗಳೂರು: ಈ ಬಾರಿ ದ.ಕ.ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲೂ ಎಸ್ ಡಿಪಿಐ ಸ್ಪರ್ಧಿಸಲಿದೆ. ಉಳ್ಳಾಲ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಹೆಸರು ಸೂಚಿಸಲಾಗುತ್ತಿದೆ. ಅಲ್ಲದೆ ನಾನು ಈಗಾಗಲೇ ಎರಡು ಬಾರಿ ಸ್ಪರ್ಧಿಸಿರುವ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲೂ ನನ್ನ ಹೆಸರಿನ ಪಟ್ಟಿ ಹೋಗಿದೆ ಎಂದು ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಹೇಳಿದರು. 

ಮಂಗಳೂರಿನಲ್ಲಿ ಖಾಸಗಿ ಹೊಟೇಲ್ ನಲ್ಲಿ ಮಾತನಾಡಿದ ಅವರು, ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿ ಎಲ್ಲಿ ಸೂಚಿಸುತ್ತದೆಯೋ, ಆ ವಿಧಾನಸಭಾ ಕ್ಷೇತ್ರದಲ್ಲಿ ನಾನು ಸ್ಪರ್ಧಿಸಲಿದ್ದೇನೆ ಎಂದರು.

ವಿಧಾನಸಭಾ ಚುನಾವಣೆಗೆ ಈ ಬಾರಿ 100ಕ್ಕಿಂತಲೂ ಅಧಿಕ ಕ್ಷೇತ್ರಗಳಲ್ಲಿ ಎಸ್ ಡಿಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ. ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಹಾಗೂ ಜಿಲ್ಲೆಗಳಿಂದ ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯ ಸಮಿತಿಗೆ ಕಳುಹಿಸಲಾಗುತ್ತದೆ. ಅಲ್ಲಿ 3 ಅಭ್ಯರ್ಥಿಗಳ ಹೆಸರು ಅಂತಿಮಗೊಂಡು ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿಗೆ ಕಳುಹಿಸಲಾಗುತ್ತದೆ. ಆ ಬಳಿಕ ಚುನಾವಣಾ ಕಣಕ್ಕಿಳಿಯುವ ಅಭ್ಯರ್ಥಿಯ ಹೆಸರು ಅಂತಿಮಗೊಳ್ಳುತ್ತದೆ. ಎಸ್ ಡಿಪಿಐ ರಾಷ್ಟ್ರೀಯ ಅಧ್ಯಕ್ಷರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜನವರಿ 7ರಂದು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಿದ್ದಾರೆ‌ ಎಂದು ಅಬ್ದುಲ್ ಮಜೀದ್ ಮೈಸೂರು ಹೇಳಿದರು.

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article